ನವದೆಹಲಿ:ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಸೇರಿದ್ದ ಹಿರಿಯ ರಾಜಕೀಯ ನೇತಾರ ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಕಡೆಯಿಂದ ರಾಷ್ಟ್ರಪತಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ ಯಶವಂತ್ ಸಿನ್ಹಾ ಟಿಎಂಸಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದರು. ಪ್ರತಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ವಿಶಾಲ ತಳಹದಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡುವ ಉದ್ದೇಶದಿಂದ ತಾವು ಪಕ್ಷ ತೊರೆಯುತ್ತಿರುವುದಾಗಿ ಯಶವಂತ್ ಸಿನ್ಹಾ ತಿಳಿಸಿದ್ದರು.