ನವದೆಹಲಿ:ದೇಶವಿರೋಧಿ ಮತ್ತು ಭಯೋತ್ಪಾದನೆ, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಜಮ್ಮು- ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ತಮ್ಮ ಮೇಲಿರುವ ಪ್ರಕರಣಗಳನ್ನು ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ಕ್ಯಾತೆ ತೆಗೆದು ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಯಾಸಿನ್ ಮಲಿಕ್ ಶುಕ್ರವಾರ ಬೆಳಗ್ಗೆಯಿಂದ ಉಪವಾಸ ನಡೆಸುತ್ತಿದ್ದಾರೆ. ತನ್ನ ಮೇಲಿರುವ ಪ್ರಕರಣಗಳನ್ನು ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೆ, ಈ ಬಗೆಗಿನ ಆಕ್ಷೇಪವನ್ನು ಸತ್ಯಾಗ್ರಹದ ಮೂಲಕ ತೋರಿಸುತ್ತಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.