ನವದೆಹಲಿ:ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ನಿನ್ನೆ ರಾಜೀನಾಮೆ ನೀಡಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇದೀಗ ಲಭ್ಯವಾಗಿರುವ ಮಹತ್ವದ ಸುದ್ದಿವೊಂದು ಹೊರಬಿದ್ದಿದ್ದು, ಆ ಪ್ರಕಾರ ಬಿಎಸ್ವೈ ತಮ್ಮ ಸಿಎಂ ಸ್ಥಾನಕ್ಕೆ ಕಳೆದ ಜುಲೈ 10ರಂದೇ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ. ಬಿಜೆಪಿಯ ಹಿರಿಯ ಮುಖಂಡರೊಬ್ಬರು ಇದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ಜುಲೈ 10ರಂದೇ ಮುಖ್ಯಮಂತ್ರಿ ಬಿಎಸ್ವೈ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದರು ಎನ್ನಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರು ದಿನಗಳ ಬಳಿಕ ಬಿಎಸ್ವೈ ದೆಹಲಿಗೆ ತೆರಳಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಮುಖಂಡರನ್ನು ಭೇಟಿ ಮಾಡಿದ್ದರು. ಈ ವೇಳೆ ತಮ್ಮ ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು ಎನ್ನಲಾಗಿದೆ. ಆದರೆ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಬಿಎಸ್ವೈ ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.