ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ 2022ರ ಮುನ್ನವೇ ರಾಜ್ಯದಲ್ಲಿ ಮತದಾರರನ್ನು ಸೆಳೆಯುವ ತಂತ್ರ ಜೋರಾಗಿಯೇ ಸಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಖಾಸಗಿ ಕೊಳವೆಬಾವಿಗಳ ವಿದ್ಯುತ್ ಬಿಲ್‌ಗಳಲ್ಲಿ ಶೇ 50ರಷ್ಟು ರಿಯಾಯಿತಿ ಘೋಷಿಸಿದೆ.
ಖಾಸಗಿ ಕೊಳವೆಬಾವಿಗಳ ವಿದ್ಯುತ್ ಬಿಲ್‌ಗಳಲ್ಲಿ ಶೇ 50 ರಿಯಾಯಿತಿ ನೀಡಿದ ಯೋಗಿ ಸರ್ಕಾರ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಗೆ ಮುಂಚಿತವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಖಾಸಗಿ ಕೊಳವೆಬಾವಿಗಳ ವಿದ್ಯುತ್ ಬಿಲ್‌ಗಳಲ್ಲಿ ಭಾರಿ ರಿಯಾಯಿತಿ ಪ್ರಕಟಿಸಿದೆ.
ಖಾಸಗಿ ಕೊಳವೆಬಾವಿಗಳ ವಿದ್ಯುತ್ ಬಿಲ್‌ಗಳಲ್ಲಿ 50% ರಿಯಾಯಿತಿ ನೀಡಿದ ಸರ್ಕಾರ
ಇದನ್ನೂ ಓದಿ: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬುಗೆ ಕೋವಿಡ್ ಪಾಸಿಟಿವ್
ಚುನಾವಣೆ ಸಂದರ್ಭದಲ್ಲಿ ಜನತಾ ನ್ಯಾಯಾಲಯದ ಮೊರೆ ಹೋಗಬೇಕಾದ ಪಕ್ಷಗಳು ಉಚಿತ ಕೊಡುಗೆಗಳನ್ನು ನೀಡಲು ಪೈಪೋಟಿ ನಡೆಸುತ್ತಿವೆ. ರಾಜ್ಯದಲ್ಲಿ ಫೆಬ್ರವರಿಯಿಂದ ಮಾರ್ಚ್ 2022 ರ ಅವಧಿಯಲ್ಲಿ ಚುನಾವಣೆ ನಡೆಯಲಿವೆ. ಆಡಳಿತಾರೂಢ ಬಿಜೆಪಿ ಮತ್ತು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ನಡುವೆ ಸ್ಪರ್ಧೆ ಏರ್ಪಟ್ಟಿದೆ.