ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಯಾಗಿ ಮತ್ತೊಂದು ಅವಧಿಗೆ ಯೋಗಿ ಆದಿತ್ಯನಾಥ್ ನಾಳೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇವರ ಜೊತೆಗೆ 50 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಯೋಗಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿರುವ ಭಾರತೀಯ ಜನತಾ ಪಾರ್ಟಿ ಮತ್ತೊಂದು ಅವಧಿಗೆ ಸರ್ಕಾರ ರಚನೆ ಮಾಡುವ ಕಸರತ್ತು ನಡೆಸಿದೆ. ಸಚಿವರ ಹೆಸರು ಅಂತಿಮಗೊಳಿಸುವ ಉದ್ದೇಶದಿಂದ ಯೋಗಿ ಆದಿತ್ಯನಾಥ್ ನಿನ್ನೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಅನೇಕ ಸುತ್ತಿನ ಮಾತುಕತೆ ನಡೆಸಿದ್ದರು.