ನವದೆಹಲಿ:ಉತ್ತರಪ್ರದೇಶದಲ್ಲಿ ರಾಜಕೀಯ ಬೆಳವಣಿಗೆಗಳು ಬಿರುಸುಗೊಂಡಿವೆ. ನಾಯಕತ್ವದ ಬದಲಾವಣೆ ವಿಚಾರ ಭಾರಿ ಸದ್ದು ಮಾಡುತ್ತಿದೆ. ಈ ನಡುವೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಉತ್ತರಪ್ರದೇಶಕ್ಕೆ ಭೇಟಿ ನೀಡಿ ಎಲ್ಲರೊಂದಿಗೆ ಚರ್ಚೆ ನಡೆಸಿ, ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ ಎಂದು ಹೇಳಿದ್ದರು.
ಈ ಎಲ್ಲ ಬೆಳವಣಿಗೆಗಳ ನಡುವೆ ಇಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮಾತುಕತೆ ಬೆಳವಣಿಗೆಗಳ ಬಗ್ಗೆ ಯಾವುದೇ ಮಾಹಿತಿ ಸಿಗದಿದ್ದರೂ, ಇಬ್ಬರ ಭೇಟಿ ತೀವ್ರ ಕುತೂಹಲವನ್ನ ಹುಟ್ಟು ಹಾಕಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಂತರ ನಡೆಯುತ್ತಿರುವ ಮೊದಲ ಭೇಟಿ ಇದಾಗಿದೆ.