ಲಕ್ನೋ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಆರು ತಿಂಗಳವರೆಗೆ ಯಾವುದೇ ಪ್ರತಿಭಟನೆ, ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಎಸ್ಮಾ ಕಾಯ್ದೆ ಜಾರಿಗೊಳಿಸಿದ್ದಾರೆ.
ಈ ಕಾಯ್ದೆಯ ಪ್ರಕಾರ ವಾರಂಟ್ ಇಲ್ಲದೆ ಯಾರನ್ನು ಬೇಕಾದರೂ ಬಂಧಿಸಲು ಪೊಲೀಸರಿಗೆ ಸಂಪೂರ್ಣ ಅಧಿಕಾರವಿರುತ್ತದೆ.
ರಾಜ್ಯ ಸರ್ಕಾರದ ಒಡೆತನದ ಹಾಗೂ ನಿಯಂತ್ರಿಸುವ ಯಾವುದೇ ಇಲಾಖೆ, ನಿಗಮಗಳು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳು ಪ್ರತಿಭಟನೆ ಮಾಡುವಂತಿಲ್ಲ ಎಂದು ಪ್ರಕಟಣೆ ಹೊರಡಿಸಲಾಗಿದೆ.