ಲಕ್ನೋ (ಉತ್ತರ ಪ್ರದೇಶ): ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ ಉತ್ತರ ಪ್ರದೇಶದ ಸರ್ಕಾರ ವಾರಾಂತ್ಯದ ಲಾಕ್‌ಡೌನ್ ಅನ್ನು ಒಂದು ದಿನ ವಿಸ್ತರಿಸುವುದಾಗಿ ಪ್ರಕಟಿಸಿದೆ.
ಉತ್ತರ ಪ್ರದೇಶದಲ್ಲಿ ವೀಕೆಂಡ್ ಲಾಕ್‌ಡೌನ್ ಮಂಗಳವಾರ ಮುಂಜಾನೆವರೆಗೆ ವಿಸ್ತರಣೆ
ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ತಡೆಯಲು ಉತ್ತರ ಪ್ರದೇಶದ ಸರ್ಕಾರವು ರಾಜ್ಯದಲ್ಲಿ ವಾರಾಂತ್ಯದ ಲಾಕ್‌ಡೌನ್ ಅನ್ನು ಒಂದು ದಿನ ವಿಸ್ತರಿಸುವುದಾಗಿ ಘೋಷಿಸಿದೆ.
ಉತ್ತರ ಪ್ರದೇಶದದಲ್ಲಿ ವೀಕೆಂಡ್ ಲಾಕ್‌ಡೌನ್ ಮಂಗಳವಾರ ಬೆಳಗ್ಗೆಯರೆಗೆ ವಿಸ್ತರಣೆ
ವಾರಾಂತ್ಯದ ಲಾಕ್‌ಡೌನ್ ಶುಕ್ರವಾರ ರಾತ್ರಿ 8 ರಿಂದ ಆರಂಭವಾಗಿ ಸೋಮವಾರ ಬೆಳಗ್ಗೆ 7 ಗಂಟೆಗೆ ಮುಗಿಯಬೇಕಿತ್ತು. ಆದರೆ ಮಂಗಳವಾರ ಬೆಳಗ್ಗೆ 7 ಗಂಟೆಯವರೆಗೆ ಲಾಕ್‌ಡೌನ್ ಮುಂದುವರೆಯುತ್ತದೆ ಎಂದು ಯೋಗಿ ಸರ್ಕಾರ ಹೇಳಿದೆ.
ರಾಜ್ಯದಲ್ಲಿ ಶನಿವಾರ, ಭಾನುವಾರ ಮತ್ತು ಸೋಮವಾರ ಮಾರುಕಟ್ಟೆಗಳು ಸಂಪೂರ್ಣವಾಗಿ ಮುಚ್ಚಲ್ಪಡುತ್ತವೆ. ಲಾಕ್‌ಡೌನ್ ವೇಳೆ ಆಸ್ಪತ್ರೆಗಳು ಸೇರಿದಂತೆ ಇತರ ಅಗತ್ಯ ಸೇವೆಗಳು ಕಾರ್ಯನಿರ್ವಹಿಸುತ್ತವೆ. ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಮುಂದುವರಿಯಲಿದೆ ಎಂದು ಸರ್ಕಾರ ಆದೇಶಿಸಿದೆ.