ಕರಡ್ (ಮಹಾರಾಷ್ಟ್ರ):ಎಲೆಕ್ಟ್ರಿಕ್ ಬೈಕ್‌ನ ಬ್ಯಾಟರಿ ಚಾರ್ಜ್ ಮಾಡುವಾಗ ಯುವತಿಯೊಬ್ಬಳು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದಾಳೆ. ಶಿವಾನಿ ಅನಿಲ್ ಪಾಟೀಲ್ (23) ಸಾವನ್ನಪ್ಪಿರುವ ಯುವತಿ.
ಕರಡ್ ಗ್ರಾಮಾಂತರ ಠಾಣೆ ಪೊಲೀಸರ ಪ್ರಕಾರ, ಇಂದು ಮಧ್ಯಾಹ್ನ ಎಲೆಕ್ಟ್ರಿಕ್ ಬೈಕ್‌ನ ಬ್ಯಾಟರಿಯನ್ನು ಚಾರ್ಜ್ ಮಾಡುವಾಗ ಶಿವಾನಿ ಪಾಟೀಲ್ಗೆ ವಿದ್ಯುತ್ ಸ್ಪರ್ಶಿಸಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆಯನ್ನು ಕುಟುಂಬಸ್ಥರು ಚಿಕಿತ್ಸೆಗಾಗಿ ಕರಡ್‌ನ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಚಿಕಿತ್ಸೆ ನೀಡುವ ಮುನ್ನವೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.