ಹೈದರಾಬಾದ್ :ಕೊರೊನಾ ಲಸಿಕೆ ತೆಗೆದುಕೊಳ್ಳಲು ಒತ್ತಾಯ ಮಾಡಿದ್ದಕ್ಕೆ ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ರಾಯದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಸಿಕೆ ಪಡೆಯಲು ತೆಲಂಗಾಣ ಸರ್ಕಾರ ಜಾಗೃತಿ ಕಾರ್ಯಕ್ರಮ ನಡೆಸಿದರೂ ಕೆಲವರಲ್ಲಿ ಇನ್ನೂ ಭಯ ಕಡಿಮೆಯಾಗಿಲ್ಲ ಎಂಬುದುಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಪೂರ್ವ ಗೋದಾವರಿ ಜಿಲ್ಲೆಯ ರಾಮಚಂದ್ರಪುರಂನ ಶವಿ ಪ್ರಕಾಶ್ (22) ಮೃತ ವ್ಯಕ್ತಿ. ಈತ ಕೆಲವು ವರ್ಷಗಳ ಹಿಂದೆ ತಮ್ಮ ಕುಟುಂಬದೊಂದಿಗೆ ಹೈದರಾಬಾದ್‌ಗೆ ಬಂದು ಮಣಿಕೊಂಡ ಏರಿಯಾದಲ್ಲಿ ವಾಸವಾಗಿದ್ದ. ಸೆಕ್ಯುರಿಟಿ ಗಾರ್ಡ್ ಆಗಿ ಪ್ರಕಾಶ್ ಕಾರ್ಯನಿರ್ವಹಿಸುತ್ತಿದ್ದ.