ಪ್ರಯಾಗ್‌ರಾಜ್ (ಉತ್ತರ ಪ್ರದೇಶ): ಮತದಾನದ ವೇಳೆ ಶಂಕಿತ ವಸ್ತು ಸ್ಫೋಟಿಸಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಇಂದು ನಡೆದಿದೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ 5ನೇ ಹಂತದ ಮತದಾನ ನಡೆಯುತ್ತಿದೆ. ಪ್ರಯಾಗ್‌ರಾಜ್‌ನ ಕರೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೋಟಿಂಗ್ ನಡೆಯುವ ವೇಳೆ ಇಬ್ಬರು ಸೈಕ್ಲಿಸ್ಟ್‌ಗಳು ಬಿದ್ದಿದ್ದು, ಆಗ ಸ್ಫೋಟ ಸಂಭವಿಸಿದೆ. ಇವರಿಬ್ಬರಲ್ಲಿ ಒಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.