ಸತ್ನಾ( ಮಧ್ಯಪ್ರದೇಶ): ಸತ್ನಾ ಜಿಲ್ಲೆಯ ಸಿಟಿ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಜಗತ್‌ದೇವ್ ತಲಾಬ್ ಬಳಿ 30 ವರ್ಷದ ವ್ಯಕ್ತಿಯೊಬ್ಬ 5 ವರ್ಷದ ಅಮಾಯಕ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪಿಸಲಾಗಿದೆ. ಅಪ್ರಾಪ್ತೆಯ ಸ್ಥಿತಿ ಗಂಭೀರವಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
ಜೀವನ್ ಜ್ಯೋತಿ ಕಾಲೋನಿ ನಿವಾಸಿ ರಾಕೇಶ್ ವರ್ಮಾ (30) ಅತ್ಯಾಚಾ ಎಸಗಿದ ಆರೋಪಿ. ಬಾಲಕಿಯನ್ನು ತನ್ನೊಂದಿಗೆ ನಗರದ ಹೊರವಲಯಕ್ಕೆ ಕರೆದೊಯ್ದು ಪ್ರತಿಷ್ಠಿತ ಶಿವ ದೇವಾಲಯದ ಹಿಂದಿನ ದಾರಿ ಬಳಿ ಅತ್ಯಾಚಾರ ಎಸಗಿ ಬಳಿಕ ಮಗುವನ್ನು ಅಲ್ಲಿಯೇ ಬಿಟ್ಟು ಸ್ಥಳದಿಂದ ಓಡಿ ಹೋಗಿದ್ದಾನೆ. ವಿಷಯ ತಿಳಿದ ನಂತರ ಬಾಲಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಮಗುವಿನ ಸ್ಥಿತಿ ಗಂಭೀರವಾಗಿದ್ದ ಪರಿಣಾಮ ಜಿಲ್ಲಾ ಆಸ್ಪತ್ರೆಯಿಂದ ರೇವಾ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸತ್ನಾ ಎಸ್ಪಿ ಮಹೇಂದ್ರ ಸಿಂಗ್, "ನಿನ್ನೆ ಸಂಜೆ 5:00 ಗಂಟೆ ಸುಮಾರಿಗೆ ರಾಕೇಶ್ ವರ್ಮಾ ಎಂಬ ವ್ಯಕ್ತಿ 5 ವರ್ಷದ ಅಮಾಯಕ ಬಾಲಕಿಯನ್ನು ತನ್ನ ಕುಟುಂಬ ಸದಸ್ಯರ ಮುಂದೆ ಕರೆದೊಯ್ದಿದ್ದಾನೆ. ನಂತರ ಅತ್ಯಾಚಾರ ಎಸಗಿರುವ ವಿಷಯವನ್ನು ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದು, ಚಿಕಿತ್ಸೆಗಾಗಿ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದರು. ಕೇಸ್ಗೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಾಲಕಿಗೆ ಹೆಚ್ಚಿನ ಚಿಕಿತ್ಸೆಗಾಗಿ ರೇವಾ ಮೆಡಿಕಲ್ ಕಾಲೇಜಿಗೆ ರೆಫರ್ ಮಾಡಲಾಗಿದೆ, ಪ್ರಕರಣದ ತನಿಖೆ ಮುಂದುವರೆದಿದೆ ಎಂದರು.
ಇದನ್ನೂ ಓದಿ :ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ: ಸ್ಯಾಂಡಲ್ವುಡ್ ನಿರ್ಮಾಪಕನ ಬಂಧನ