ಕರ್ನಾಟಕ

karnataka

ETV Bharat / bharat

ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನಿಗೆ ಹಿಗ್ಗಾಮುಗ್ಗಾ ಥಳಿತ- ವಿಡಿಯೋ ವೈರಲ್​ - ಮಧ್ಯಪ್ರದೇಶದ ಹಲ್ಲೆ ಪ್ರಕರಣ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಸ್ಥಳೀಯರೇ ಸೇರಿಕೊಂಡು ಕ್ರೂರವಾಗಿ ಹಲ್ಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

young man was severely beaten up for molesting the girl in rewa video gone viral
young man was severely beaten up for molesting the girl in rewa video gone viral

By

Published : Sep 21, 2021, 3:50 PM IST

ಮಧ್ಯಪ್ರದೇಶ:ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಇಲ್ಲಿನ ರೇವಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನುಮನ್ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಜುನ್ ಪುರ ಎಂಬ ಗ್ರಾಮದಲ್ಲಿ ಘಟನೆ ನಡೆದಿದೆ.

ಸೊಂಟಕ್ಕೆ ಧರಿಸಿಕೊಳ್ಳುವ ಬೆಲ್ಟ್‌ನಿಂದ ಯುವಕನ ಕುತ್ತಿಗೆ ಬಿಗಿದ ಸ್ಥಳೀಯರು ಕ್ರೂರವಾಗಿ ಎಳೆದಾಡಿದ್ದಲ್ಲದೆ ಕೋಲು ಹಾಗೂ ಬಡಿಗೆಯಿಂದ ರಕ್ತ ಬರುವ ಹಾಗೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪ್ರತ್ಯಕ್ಷದರ್ಶಿಗಳು ಯಾರೂ ಕೂಡಾ ಯುವಕನ ರಕ್ಷಣೆಗೆ ಧಾವಿಸಲಿಲ್ಲ. ಹಲ್ಲೆಗೊಳಗಾದ ಯುವಕ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿದ್ದನಂತೆ.

ಹಲ್ಲೆ ನಡೆಸಿರುವ ವಿಡಿಯೋ ವೈರಲ್

ಇದು ಸುಮಾರು 8 ದಿನದ ಹಿಂದೆ ನಡೆದಿರುವ ಘಟನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ಥಳಿಸಿದ ಯುವಕರ ಗುಂಪು ಪರಾರಿಯಾಗಿದ್ದು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಶಿವಕುಮಾರ್ ವರ್ಮಾ​ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details