ನವದೆಹಲಿ :2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ನಮನ ಸಲ್ಲಿಸಿ, ಅವರ ಬಲಿದಾನ, ತ್ಯಾಗವನ್ನು ಸ್ಮರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, '2019ರ ಈ ದಿನದಂದು ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಾನು ನಮನ ಸಲ್ಲಿಸುತ್ತೇನೆ. ರಾಷ್ಟ್ರಕ್ಕೆ ಅವರು ನೀಡಿದ ಸೇವೆ ಸ್ಮರಿಸುವೆ. ಅವರ ಶೌರ್ಯ ಮತ್ತು ತ್ಯಾಗ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬ ಭಾರತೀಯನಿಗೂ ಇದು ಪ್ರೇರಕ' ಎಂದಿದ್ದಾರೆ.
2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಕಾನ್ವಾಯ್ ಹೊರಟಿದ್ದಾಗ ಸ್ಫೋಟಕ ತುಂಬಿದ್ದ ವಾಹನವನ್ನು ಜೈಶ್ ಸಂಘಟನೆಯ ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್ ಬಸ್‌ಗೆ ಡಿಕ್ಕಿ ಹೊಡೆಸಿದ್ದ. ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು.
ಈ ಭಯೋತ್ಪಾದಕ ದಾಳಿಯ ನಂತರ ಫೆಬ್ರವರಿ 26ರಂದು ಭಾರತೀಯ ವಾಯುಪಡೆಯು ಪಾಕಿಸ್ತಾನದ ಬಾಲಾಕೋಟ್‌ನಲ್ಲಿರುವ ಜೆಇಎಂ ಭಯೋತ್ಪಾದಕ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿ ಹಲವಾರು ಭಯೋತ್ಪಾದಕರನ್ನು ಬಲಿ ತೆಗೆದುಕೊಂಡಿದ್ದಲ್ಲದೇ, ಅವರ ಅಡಗು ತಾಣಗಳನ್ನು ಛಿದ್ರಗೊಳಿಸಿತ್ತು.
ಓದಿ:ಮತ್ತೆ ಚೀನಾದ 54 ಆ್ಯಪ್ಗಳಿಗೆ ಭಾರತ ನಿಷೇಧ; ಈವರೆಗೆ 224 ಅಪ್ಲಿಕೇಶನ್ ಬ್ಯಾನ್