ಇಂದೋರ್(ಮಧ್ಯಪ್ರದೇಶ) :ಇಂದೋರ್ನಲ್ಲಿ ವ್ಯಕ್ತಿಯೋರ್ವ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಸಮವಸ್ತ್ರದಲ್ಲಿದ್ದ ಪೊಲೀಸ್ ಪೇದೆ ಮೇಲೆ ಲಾಠಿಯಿಂದಲೇ ಹಲ್ಲೆ ನಡೆಸಲಾಗಿದ್ದು, ಮಧ್ಯಪ್ರದೇಶದ ಇಂದೋರ್ನ ವೆಂಕಟೇಶ್ನಗರದಲ್ಲಿ ಈ ಘಟನೆ ನಡೆದಿದೆ. ಹಲ್ಲೆ ಮಾಡಿರುವ ಆರೋಪಿಯನ್ನ ದಿನೇಶ್(25) ಎಂದು ಗುರುತಿಸಲಾಗಿದೆ. ಈಗಾಗಲೇ ಆತನ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಯಾವ ಕಾರಣಕ್ಕಾಗಿ ಹಲ್ಲೆ? :ಶುಕ್ರವಾರ ಮಧ್ಯಾಹ್ನ ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನೇಶ್ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ. ಈ ವೇಳೆ ಕಾನ್ಸ್ಟೇಬಲ್ ಜೈಪ್ರಕಾಶ್ ಅವರ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಆಗ ಎಚ್ಚರಿಕೆಯಿಂದ ಬೈಕ್ ಚಲಾಯಿಸಿಕೊಂಡು ಹೋಗುವಂತೆ ಕಾನ್ಸ್ಟೇಬಲ್ ಬುದ್ದಿವಾದ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ದಿನೇಶ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾನೆ.