ಕರ್ನಾಟಕ

karnataka

ETV Bharat / bharat

ಎಐಸಿಸಿ ಅಧ್ಯಕ್ಷರಾಗಿ ರಾಹುಲ್​​​​ರನ್ನ ಮತ್ತೆ ನೇಮಿಸಬೇಕೆಂಬ ನಿರ್ಣಯ ಮಂಡಿಸಿದ ಯುವ ಕಾಂಗ್ರೆಸ್ - ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ರಾಹುಲ್ ಗಾಂಧಿಯನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬುದು ಕೇವಲ ನಿರ್ಣಯವಲ್ಲ ಆದರೆ, ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಧ್ವನಿಯಾಗಿದೆ ಎಂದು ಯುವ ಕಾಂಗ್ರೆಸ್​ ಟ್ವೀಟ್​ ಮಾಡಿದೆ.

Youth Congress passes resolution to appoint Rahul Gandhi as party chief
ರಾಹುಲ್ ಗಾಂಧಿ

By

Published : Mar 9, 2021, 7:05 AM IST

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೇ ಮತ್ತೆ ಎಐಸಿಸಿ ಅಧ್ಯಕ್ಷರಾಗಬೇಕು. ಪಕ್ಷದ ಮುಖ್ಯಸ್ಥರನ್ನಾಗಿ ಅವರನ್ನೇ ನೇಮಿಸಬೇಕೆಂಬ ಪಕ್ಷ ನಿರ್ಣಯವನ್ನು ನಿನ್ನೆ​​ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ಮಂಡಿಸಿದೆ.

'ರಾಹುಲ್ ರಿಟರ್ನ್ಸ್'​​ ಎಂಬ ಅಭಿಯಾನವನ್ನು ಕಾಂಗ್ರೆಸ್​ ಕಾರ್ಯಕರ್ತರು ಆರಂಭಿಸಿದ್ದು, ಈ ಹಿಂದೆ ಕೂಡ ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಛತ್ತೀಸ್​ಗಢ ಪ್ರದೇಶ ಕಾಂಗ್ರೆಸ್ ಸಮಿತಿಯು ಪಕ್ಷದ ಅಧ್ಯಕ್ಷರಾಗಿ ರಾಗಾ ಅಧಿಕಾರ ವಹಿಸಿಕೊಳ್ಳಬೇಕೆಂದು ನಿರ್ಣಯ ಮಂಡಿಸಿದ್ದವು.

ಯುವ ಕಾಂಗ್ರೆಸ್ ಟ್ವೀಟ್​

ಇದನ್ನೂ ಓದಿ:'ವಿವಾದ್​ ಸೆ ವಿಶ್ವಾಸ್' ನೇರ ತೆರಿಗೆ ವಿವಾದ ಪರಿಹಾರ ಯೋಜನೆ ಶೇ28ರಷ್ಟು ಯಶಸ್ವಿ

"ರಾಹುಲ್ ಗಾಂಧಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬುದು ಕೇವಲ ನಿರ್ಣಯವಲ್ಲ ಆದರೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಧ್ವನಿಯಾಗಿದೆ" ಎಂದು ಯುವ ಕಾಂಗ್ರೆಸ್​ ಟ್ವೀಟ್​ ಮಾಡಿದೆ.

2019ರ ಮೇ ತಿಂಗಳಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ನೈತಿಕ ಜವಾಬ್ದಾರಿ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ಗಾಂಧಿ ರಾಜೀನಾಮೆ ನೀಡಿದ್ದರು. ಪ್ರಸ್ತುತ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆಯಾಗಿದ್ದು, ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯನ್ನು ಜೂನ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಕಾಂಗ್ರೆಸ್ ಘೋಷಿಸಿದೆ.

ABOUT THE AUTHOR

...view details