ಕರ್ನಾಟಕ

karnataka

ETV Bharat / bharat

ಪ್ರತಿಭಟನೆ ವೇಳೆ ಮಡಿದ ರೈತರಿಗೆ ಯುವ ಕಾಂಗ್ರೆಸ್​ನಿಂದ ಗೌರವ

ಕೇಂದ್ರ ಜಾರಿಗೊಳಿಸಿರುವ ಕೃಷಿ ಕಾನೂನುಗಳ ವಿರುದ್ಧ ನಮ್ಮ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡುವ ವೇಳೆ ಹತ್ತಾರು ರೈತರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ದೇಶದ ಉಳಿವಿಗಾಗಿ ಹೋರಾಡುತ್ತಿರುವ ಇವರನ್ನು ಇಡೀ ದೇಶ ನೆನಪಿಸಿಕೊಳ್ಳುತ್ತಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದ್ದಾರೆ.

ಕಾಂಗ್ರೆಸ್​ನಿಂದ ಗೌರವ
ಕಾಂಗ್ರೆಸ್​ನಿಂದ ಗೌರವ

By

Published : Jan 9, 2021, 1:17 PM IST

ನವದೆಹಲಿ:ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುವ ವೇಳೆ ಮಡಿದ ರೈತರಿಗೆ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರವ್ಯಾಪಿ ಗೌರವ ಸಲ್ಲಿಸಿದೆ.

ಪ್ರತಿ ರಾಜ್ಯದಲ್ಲೂ ಶುಕ್ರವಾರ ಸಂಜೆ 6 ಗಂಟೆಗೆ 6 ನಿಮಿಷಗಳ ಕಾಲ ದೀಪ ಬೆಳಗಿಸಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.

ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮಾತನಾಡುತ್ತಾ, "ಕೇಂದ್ರ ಜಾರಿಗೊಳಿಸಿರುವ ಕೃಷಿ ಕಾನೂನುಗಳ ವಿರುದ್ಧ ನಮ್ಮ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡುವ ವೇಳೆ ಹತ್ತಾರು ರೈತರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ದೇಶದ ಉಳಿವಿಗಾಗಿ ಹೋರಾಡುತ್ತಿರುವ ಇವರನ್ನು ಇಡೀ ದೇಶ ನೆನಪಿಸಿಕೊಳ್ಳುತ್ತಿದೆ. ಮೋದಿ ಸರ್ಕಾರವು ಸರ್ವಾಧಿಕಾರ ಮನೋಭಾವವನ್ನು ಹೊಂದಿರೋದು ನಾಚಿಕೆಗೇಡಿನ ಸಂಗತಿ. ರೈತರಿಲ್ಲದೆ ದೇಶವಿಲ್ಲ. ಇದನ್ನು ಬಿಜೆಪಿ, ಆರ್​​​ಎಸ್​ಎಸ್ ಅರ್ಥ ಮಾಡಿಕೊಳ್ಳಬೇಕು" ಎಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಡೀ ದೇಶದ ಯುವ ಜನತೆ ರೈತರೊಂದಿಗಿದೆ. ಮೋದಿ ಸರ್ಕಾರ ಬಂಡವಾಳ ಶಾಹಿಗಳಿಗೆ ಕೆಲಸ ಮಾಡುತ್ತಿದ್ದು, ರೈತರನ್ನು ಅವಮಾನಿಸುತ್ತಿದೆ ಎಂದು ಐವೈಸಿಯ ರಾಷ್ಟ್ರೀಯ ಮಾಧ್ಯಮ ಉಸ್ತುವಾರಿ ರಾಹುಲ್ ರಾವ್ ಕೇಂದ್ರದ ವಿರುದ್ಧ ಕುಟುಕಿದ್ದಾರೆ.

ABOUT THE AUTHOR

...view details