ಪಾಟ್ನಾ(ಬಿಹಾರ್):ತತ್ಕಾಲ್ ಟಿಕೆಟ್‌ಗಾಗಿ ಸರತಿ ಸಾಲಿನಲ್ಲಿ ನಿಲ್ಲುವ ವಿಚಾರದಲ್ಲಿ ಗಲಾಟೆಯಾಗಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಪಾಟ್ನಾದ ಬಿಹ್ತಾ ರೈಲು ನಿಲ್ದಾಣದಲ್ಲಿ ಭಾನುವಾರ ಈ ಘಟನೆ ನಡೆದಿದೆ.
ನಿನ್ನೆ ತತ್ಕಾಲ್ ಟಿಕೆಟ್‌ಗಾಗಿ ಬಿಹ್ತಾ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಭಾರಿ ಜನಸಂದಣಿ ಇತ್ತು. ಈ ನಡುವೆ ಕೌಂಟರ್‌ನಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ವಿಚಾರದಲ್ಲಿ ಜನರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ, ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.