ಮಲಪ್ಪುರಂ (ಕೇರಳ) : ಲವ್ ಪ್ರಪೋಸ್ ನಿರಾಕರಿಸಿದ್ದಕ್ಕೆ ಯುವಕನೋರ್ವ ಚಾಕುವಿನಿಂದ ಇರಿದು ಯುವತಿಯನ್ನು ಕೊಲೆ ಮಾಡಿದ್ದಾನೆ. ಈ ಘಟನೆ ಕೇರಳದಲ್ಲಿ ನಡೆದಿದ್ದು, ಮೃತ ಯುವತಿಯನ್ನ 21 ವರ್ಷದ ದೃಶ್ಯಾ ಎಂದು ಗುರುತಿಸಲಾಗಿದೆ. ಸಾವನ್ನಪ್ಪಿರುವ ಯುವತಿಯನ್ನ ಮಲಪ್ಪುರಂ ಎಲನಾಡ್ನ ನಿವಾಸಿ ಎಂದು ಗುರುತಿಸಲಾಗಿದೆ.
ಪೊಲೀಸರು ಈಗಾಗಲೇ ಆರೋಪಿ ವಿನೇಶ್ ವಿನೋದ್ನನ್ನು (21) ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಮೃತ ದೃಶ್ಯಾಳ ಸಹೋದರಿ ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 8:30ರ ವೇಳೆಗೆ ಈ ಘಟನೆ ನಡೆದಿದೆ.