ಕೊಯಮತ್ತೂರು(ತಮಿಳುನಾಡು):ಶಾಲಾ ವಿದ್ಯಾರ್ಥಿನಿಯೋರ್ವಳಿಗೆ ಯುವಕನೊಬ್ಬ ತಾಳಿ ಕಟ್ಟಿರುವ ವಿಡಿಯೋ ವೈರಲ್ ಆಗಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಶಾಲಾ ವಿದ್ಯಾರ್ಥಿನಿಗೆ ಯುವಕ ತಾಳಿ ಕಟ್ಟಿದ ವಿಡಿಯೋ ವೈರಲ್... ಆರೋಪಿಯ ಬಂಧನ - ತಮಿಳುನಾಡಿನ ಇತ್ತೀಚಿನ ಸುದ್ದಿ
ಶಾಲಾ ವಿದ್ಯಾರ್ಥಿನಿಯೋರ್ವಳಿಗೆ ತಾಳಿ ಕಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
![ಶಾಲಾ ವಿದ್ಯಾರ್ಥಿನಿಗೆ ಯುವಕ ತಾಳಿ ಕಟ್ಟಿದ ವಿಡಿಯೋ ವೈರಲ್... ಆರೋಪಿಯ ಬಂಧನ Youth ties knot to a school girl](https://etvbharatimages.akamaized.net/etvbharat/prod-images/768-512-11085736-thumbnail-3x2-wdfdfdf.jpg)
ತಮಿಳುನಾಡಿನ ಕೊಯಮತ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲ ದಿನಗಳಿಂದ ವಿಡಿಯೋ ಹರಿದಾಡುತ್ತಿತ್ತು. ಲಭ್ಯವಾಗಿರುವ ಮಾಹಿತಿ ಪ್ರಕಾರ ಇದು ಒಂದು ವರ್ಷದ ಹಿಂದಿನ ವಿಡಿಯೋ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವಲ್ಲಿ ಪೊಲೀಸರು ಹಾಗೂ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಆರೋಪಿಯನ್ನ ಗೌತಮ್(23) ಎಂದು ಗುರುತಿಸಲಾಗಿದ್ದು, ಕೊಯಮತ್ತೂರಿನ ಸುಟ್ಟೊನ್ ಎಸ್ಟೇಟ್ ಪ್ರದೇಶದಲ್ಲಿ ವಾಸವಾಗಿದ್ದಾನೆ. ವಿದ್ಯಾರ್ಥಿನಿ ತನ್ನ ತಂದೆ ಜತೆ ನಮಕ್ಕಲ್ನಲ್ಲಿ ವಾಸವಾಗಿದ್ದು, ತಾಯಿ ಬೇರೆಯಾಗಿ ಜೀವನ ನಡೆಸುತ್ತಿದ್ದಾಳೆ ಎಂದು ತಿಳಿದು ಬಂದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.