ನವದೆಹಲಿ:ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ಮಂಗಳವಾರ ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರನ್ನು ಕಾರಿನಲ್ಲಿ ಅಪಹರಿಸಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ಘಟನೆ ಬಗ್ಗೆ ಜೆಎನ್‌ಯು ಉಪಕುಲಪತಿ ಮತ್ತು ಭದ್ರತಾ ಪ್ರಭಾರಾಧಿಕಾರಿಗಳಿಗೂ ದೂರು ನೀಡಲಾಗಿದೆ. ಜೆಎನ್‌ಯು ವಿದ್ಯಾರ್ಥಿ ಸಂಘ ಮತ್ತು ಎಬಿವಿಪಿ ಪರವಾಗಿ ಜೆಎನ್‌ಯು ಆಡಳಿತಕ್ಕೂ ದೂರು ನೀಡಲಾಗಿದೆ. ಈ ನಡುವೆ ಕ್ಯಾಂಪಸ್ ಭದ್ರತೆಯಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಎಬಿವಿಪಿ ಪ್ರಕಾರ "ರಾತ್ರಿ ಒಂದು ಗಂಟೆಯ ಸುಮಾರಿಗೆ ಇಬ್ಬರು ವಿದ್ಯಾರ್ಥಿನಿಯರು ಕ್ಯಾಂಪಸ್‌ನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ಹರಿಯಾಣ ನಂಬರ್ ಪ್ಲೇಟ್ ಇರುವ ಬಿಳಿ ಬಣ್ಣದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಮೂವರು ಹುಡುಗರು ವಿದ್ಯಾರ್ಥಿನಿಯರಿಬ್ಬರನ್ನೂ ಎಳೆದೊಯ್ದು ಕಾರಿನಲ್ಲಿ ಕೂರಿಸಲು ಯತ್ನಿಸಿದ್ದಾರೆ. ಬಾಲಕಿಯರ ವಿರೋಧದಿಂದಾಗಿ ಅವರನ್ನು ಅಪಹರಿಸಲು ಸಾಧ್ಯವಾಗದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಕ್ಯಾಂಪಸ್‌ನಲ್ಲಿ ಈ ಕಾರು ಆಗಾಗ ಕಾಣಿಸಿಕೊಳ್ಳುತ್ತದೆ" ಎಂದು ಎಬಿವಿಪಿ ಆರೋಪಿಸಿದೆ.
ದೆಹಲಿ ಪೊಲೀಸರಿಗೆ ಅಲ್ಟಿಮೇಟಮ್:ಇಬ್ಬರು ಸಂತ್ರಸ್ತ ಬಾಲಕಿಯರಲ್ಲಿ ಒಬ್ಬಳು ತನ್ನ ಎಂಎಲ್‌ಸಿ(Medico legal case)ಯನ್ನು ಪಡೆದಿದ್ದಾಳೆ ಮತ್ತು ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘ ಹೇಳಿದೆ. ಜೆಎನ್‌ಯು ವಿದ್ಯಾರ್ಥಿ ಸಂಘದಿಂದ ಉಪಕುಲಪತಿಗಳಿಗೆ ದೂರು ನೀಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಕುಲಪತಿಗಳನ್ನು ಭೇಟಿ ಮಾಡಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಿದ್ದಾರೆ. ಇದರೊಂದಿಗೆ ವಿದ್ಯಾರ್ಥಿ ಸಂಘದ ವತಿಯಿಂದ ದೆಹಲಿ ಪೊಲೀಸರಿಗೆ ಅಲ್ಟಿಮೇಟಮ್ ನೀಡಲಾಗಿದೆ. 12 ಗಂಟೆಯೊಳಗೆ ದೆಹಲಿ ಪೊಲೀಸರು ಆರೋಪಿಗಳನ್ನು ಬಂಧಿಸದಿದ್ದರೆ ವಿದ್ಯಾರ್ಥಿ ಸಂಘ ಪ್ರತಿಭಟನೆ ನಡೆಸಲಿದೆ ಎಂದು ವಿದ್ಯಾರ್ಥಿ ಸಂಘ ಎಚ್ಚರಿಕೆ ನೀಡಿದೆ.