ಗುಂಟೂರು (ಆಂಧ್ರಪ್ರದೇಶ): ಆಂಧ್ರ ಪ್ರದೇಶದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ಹೊಂದಿದೆ. ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ವೈ.ಎಸ್.ವಿಜಯಮ್ಮ ಘೋಷಿಸಿದ್ದಾರೆ.
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಚಿನಕಾಕಣಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ವೈ.ಎಸ್.ವಿಜಯಮ್ಮ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರ ತಾಯಿ ಆಗಿರುವ ವಿಜಯಮ್ಮ, ನನ್ನಿಂದ ಯಾರಿಗೂ ಯಾವುದೇ ಅಭ್ಯಂತರ ಉಂಟಾಗಬಾರದು ಎಂದು ನಾನು ರಾಜೀನಾಮೆ ನೀಡುವ ನಿರ್ಣಯ ಮಾಡಿದ್ದೇನೆ. ಇದಕ್ಕಾಗಿ ನನ್ನನ್ನು ಕ್ಷಮಿಸಿ ಎಂದೂ ತಿಳಿಸಿದ್ದಾರೆ.
ವೈಎಸ್ಆರ್ ಕಾಂಗ್ರೆಸ್ ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ವಿಜಯಮ್ಮ ರಾಜೀನಾಮೆ ಘೋಷಣೆ ಮಗಳು ಶರ್ಮಿಳಾಗೆ ಬೆಂಬಲ: ಜಗನ್ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ ತೆಲಂಗಾಣದಲ್ಲಿ ಹೊಸ ಪಕ್ಷ ಕಟ್ಟಿದ್ದಾರೆ. ಶರ್ಮಿಳಾ ಅವರ ಈ ನಿರ್ಧಾರವನ್ನು ಬೆಂಬಲಿಸಿ ತಾಯಿ ವಿಜಯಮ್ಮ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.
ದಿ.ವೈ.ಎಸ್.ರಾಜಶೇಖರ ರೆಡ್ಡಿ ಪತ್ನಿಯಾಗಿ ಮತ್ತು ಶರ್ಮಿಳಾ ತಾಯಿಯಾಗಿ ನಾನು ತೆಲಂಗಾಣದಲ್ಲಿ ಹೊಸ ಪಕ್ಷದ ಪರವಾಗಿ ನಿಲ್ಲುವ ಅವಶ್ಯಕತೆ ಇದೆ. ಇಂದು ಜಗನ್ ಮತ್ತು ಶರ್ಮಿಳಾ ಬೇರೆ - ಬೇರೆ ಪಕ್ಷಗಳು ಮತ್ತು ರಾಜ್ಯಗಳನ್ನು ಪ್ರತಿನಿಧಿಸುವ ಅನಿರ್ವಾಯತೆ ಯಾಕೆ ಬಂದಿದೆ ಆ ದೇವರಿಗೆ ಗೊತ್ತು. ಕಷ್ಟದಲ್ಲಿದ್ದಾಗ ನಾನು ಜಗನ್ ಜೊತೆಗಿದ್ದೆ, ಸಂತೋಷವಾಗಿದ್ದಲೂ ನಾನು ಆತನ ಜೊತೆಗಿದ್ದರೆ ನನ್ನ ಮಗಳು ಶರ್ಮಿಳಾಗೆ ಅನ್ಯಾಯ ಮಾಡುತ್ತಿದ್ದೇನೆ ಎಂದು ನನ್ನ ಮನಸಾಕ್ಷಿ ಹೇಳುತ್ತಿದೆ ಎಂದು ವಿಜಯಮ್ಮ ಹೇಳಿದ್ದಾರೆ.
ಇದನ್ನೂ ಓದಿ:'ಮಹಾ' ಸಿಎಂ ಆಗಿ ಏಕನಾಥ್ ಶಿಂಧೆ ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ