ತಿರುವನಂತಪುರಂ: ಕೇರಳದಲ್ಲಿ ಇದೇ ಮೊದಲ ಬಾರಿಗೆ ಝಿಕಾ ವೈರಸ್ ಪ್ರಕರಣ ಪತ್ತೆಯಾಗಿದೆ. ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪರಶಾಲದ 24 ವರ್ಷದ ಗರ್ಭಿಣಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ಜೂನ್ 28 ರಂದು ಮಹಿಳೆ ಜ್ವರ, ತಲೆನೋವು ಮತ್ತು ಕೆಂಪು ಕಲೆಗಳ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ರೋಗಿಯ ಮಾದರಿ ಪರೀಕ್ಷೆಯಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
13 ಶಂಕಿತರ ಮಾದರಿ ಪುಣೆಗೆ ರವಾನೆ:
ತಿರುವನಂತಪುರಂ ಜಿಲ್ಲೆಯಿಂದ ಶಂಕಿತ 13 ಮಂದಿಯ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್‌ಐವಿ)ಗೆ ಕಳುಹಿಸಲಾಗಿದೆ. ಇಲ್ಲಿಂದ ಒಟ್ಟು 19 ಮಾದರಿಗಳನ್ನು ಕಳುಹಿಸಲಾಗಿದೆ. ವೈದ್ಯರು ಸೇರಿದಂತೆ 13 ಮಂದಿ ಆರೋಗ್ಯ ಕಾರ್ಯಕರ್ತರಿದ್ದಾರೆ. ಇವರ ವರದಿಯೂ ಪಾಸಿಟಿವ್ ಬರುವ ಶಂಕೆ ವ್ಯಕ್ತಪಡಿಸಿದ್ದಾರೆ.