ಕರ್ನಾಟಕ

karnataka

ETV Bharat / briefs

ಬಹ್ರೇನ್​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ 169 ಮಂದಿ ಪ್ರಯಾಣಿಕರು - Corona effects

ಕೋವಿಡ್ ಬಿಕ್ಕಟ್ಟಿನಿಂದ ಬಹ್ರೇನ್‌ನಲ್ಲಿ ಸಿಲುಕಿದ್ದ 169 ಕನ್ನಡಿಗರಿಂದು ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೆಂಗಳೂರಿಗೆ ಆಗಮಿಸಿದರು.

169 passengers from Bahrain to Bangalore airport
169 passengers from Bahrain to Bangalore airport

By

Published : Jun 13, 2020, 10:19 PM IST

ದೇವನಹಳ್ಳಿ:ಕೋವಿಡ್-19 ಪರಿಸ್ಥಿತಿಯಿಂದಾಗಿ ಬಹ್ರೇನ್‌ನಲ್ಲಿ ಸಿಲುಕಿದ್ದ ಕನ್ನಡಿಗರು ಇಂದು ತಾಯ್ನಾಡಿಗೆ ಮರಳಿದ್ದಾರೆ.

ಇಂದು ಸಂಜೆ 5.30 ಗಂಟೆಗೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೆಂಗಳೂರಿಗೆ ಆಗಮಿಸಿದ 36ನೇ ಏರ್ ಇಂಡಿಯಾ ವಿಮಾನದಲ್ಲಿ 2 ಮಕ್ಕಳು, 113 ಪುರುಷರು ಹಾಗೂ 54 ಮಹಿಳೆಯರು ಸೇರಿದಂತೆ ಒಟ್ಟು 169 ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ.

ಬಹ್ರೇನ್​​ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 169 ಪ್ರಯಾಣಿಕರು
ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ ಗುಣಲಕ್ಷಣಗಳು ಕಂಡು ಬಂದಿಲ್ಲ. ಸದ್ಯ ಎಲ್ಲಾ ಪ್ರಯಾಣಿಕರನ್ನು ಕ್ವಾರಂಟೈನ್​​ಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ABOUT THE AUTHOR

...view details