ಕೋಲ್ಕತ್ತಾ(ಪಶ್ಚಿಮ ಬಂಗಾಳ):ಬಿಜೆಪಿಯ ನಿಸಿತ್ ಪ್ರಮಾಣಿಕ್ ಮತ್ತು ಜಗನ್ನಾಥ್ ಸರ್ಕಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಬಿಮನ್ ಬ್ಯಾನರ್ಜಿಗೆ ಬುಧವಾರ ವಿಧಾನಸಭೆಯಲ್ಲಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಆದರೂ ಅವರು ಸಂಸದರಾಗಿ ಮುಂದುವರಿಯುತ್ತಾರೆ. ದಿನ್ಹತಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಿಸಿತ್ ಪ್ರಮಾಣಿಕ್ ಹಾಗೂ ಜಗನ್ನಾಥ ಸರ್ಕಾರ್ ಶಾಂತಿಪುರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.