ವಿಜಯಪುರ: ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಇಲ್ಲಿಯವರೆಗೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ.ಇಲ್ಲಿಯವರೆಗೆ ಬ್ಲ್ಯಾಕ್ ಫಂಗಸ್ ರೋಗ ಜಿಲ್ಲೆಯ 156 ಜನರಲ್ಲಿ ಕಾಣಿಸಿಕೊಂಡಿದೆ. 39 ರೋಗಿಗಳು ಗುಣಮುಖರಾಗಿದ್ದು, ಇನ್ನೂ 91 ರೋಗಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಜಯಪುರದಲ್ಲಿ ಬ್ಲ್ಯಾಕ್ ಫಂಗಸ್ಗೆ ಇಬ್ಬರು ಬಲಿ - ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್
ವಿಜಯಪುರದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ದಿನೇ ದಿನೆ ಹೆಚ್ಚಳವಾಗುತ್ತಿದೆ. ಈ ರೋಗಕ್ಕೆ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Black Fungus in Vijaypura
ಅವರಲ್ಲಿ 7 ರೋಗಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ ರೋಗಿಗಳಿಗೆ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.