ಶ್ರೀನಗರ:ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಕೇಂದ್ರ ಮೀಸಲು ಪಡೆ ಯೋಧರನ್ನು ಗುರಿಯಾಗಿಸಿ ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.
ಅನಂತ್ನಾಗ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧರು ಪ್ರತಿದಾಳಿ ನಡೆಸುತ್ತಿದ್ದು, ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಜಮ್ಮು-ಕಾಶ್ಮೀರ ಪೊಲೀಸ್ ಠಾಣೆಯ ಓರ್ವ ಪೊಲೀಸ್ ಅಧಿಕಾರಿ,ಇಬ್ಬರು ಯೋಧರು ಹಾಗೂ ಓರ್ವ ಮಹಿಳೆ ಕೂಡ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ.