ಕರ್ನಾಟಕ

karnataka

ETV Bharat / briefs

ಕೋವಿಡ್ ಕರ್ತವ್ಯದಲ್ಲಿ ಲೋಪ.. ಮಲೆಮಹದೇಶ್ವರ ಬೆಟ್ಟದ 36 ಮಂದಿ ವಿರುದ್ಧ ಕೇಸ್! - ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

ಕರ್ತವ್ಯಲೋಪ ಎಸಗಿದವರಿಗೆ ಡಿಸಿ‌ ಆದೇಶದಂತೆ ಖಾಯಂ ನೌಕರರಿಗೆ ಕಾರಣ ಕೇಳಿ ನೋಟಿಸ್ ಕೊಡಲಾಗುವುದು ಮತ್ತು ಹೊರಗುತ್ತಿಗೆ ನೌಕರರನ್ನು ಸೇವೆಯಿಂದ ತೆಗೆದು‌ ಹಾಕಲಾಗುವುದು. ಜೊತೆಗೆ ಕ್ರಿಮಿನಲ್ ಕೇಸ್ ಕೂಡ ದಾಖಲಿಸಲಾಗುವುದು ಎಂದು ಅವರು ಇದೇ ವೇಳೆ ಪ್ರತಿಕ್ರಿಯಿಸಿದ್ದಾರೆ..

CCC
CCC

By

Published : May 16, 2021, 6:06 PM IST

Updated : May 16, 2021, 6:36 PM IST

ಚಾಮರಾಜನಗರ :ಕೋವಿಡ್ ಕಾರ್ಯ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ 36 ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದ್ದಾರೆ.

ಈ ಕುರಿತು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದು, ಮಲೆಮಹದೇಶ್ವರ ಬೆಟ್ಟದಿಂದ ಕೋವಿಡ್ ಕರ್ತವ್ಯ ನಿರ್ವಹಿಸಲು ಚಾಮರಾಜನಗರಕ್ಕೆ ಕಳುಹಿಸಿದ್ದವರಲ್ಲಿ 36 ಮಂದಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರಲಿಲ್ಲ.

ಪ್ರಾಧಿಕಾರದ ಗಮನಕ್ಕೂ ತರದೇ ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ.‌ ಖಾಯಂ ಮತ್ತು ಹೊರಗುತ್ತಿಗೆ ನೌಕರರು ಸೇರಿದಂತೆ ಒಟ್ಟು 36 ಮಂದಿ ಈ ಲೋಪ ಎಸಗಿದ್ದು, ಇವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ಡಿಸಿ ಸೂಚಿಸಿದ್ದಾರೆ ಎಂದು ತಿಳಿಸಿದರು.

36 ಸಿಬ್ಬಂದಿ ಬದಲಾಗಿ ಮತ್ತೆ 36 ಮಂದಿಯನ್ನು ಚಾಮರಾಜನಗರಕ್ಕೆ ಕಳುಹಿಸಿಕೊಟ್ಟಿದ್ದು, ವಿವಿಧ ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ತೊಡಗಿರುವ ಮಲೆಮಹದೇಶ್ವರ ಬೆಟ್ಟದ ಸಿಬ್ಬಂದಿಯನ್ನು ಕೂಡ ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಲಾಗುತ್ತದೆ ಎಂದರು.

ಕರ್ತವ್ಯಲೋಪ ಎಸಗಿದವರಿಗೆ ಡಿಸಿ‌ ಆದೇಶದಂತೆ ಖಾಯಂ ನೌಕರರಿಗೆ ಕಾರಣ ಕೇಳಿ ನೋಟಿಸ್ ಕೊಡಲಾಗುವುದು ಮತ್ತು ಹೊರಗುತ್ತಿಗೆ ನೌಕರರನ್ನು ಸೇವೆಯಿಂದ ತೆಗೆದು‌ ಹಾಕಲಾಗುವುದು. ಜೊತೆಗೆ ಕ್ರಿಮಿನಲ್ ಕೇಸ್ ಕೂಡ ದಾಖಲಿಸಲಾಗುವುದು ಎಂದು ಅವರು ಇದೇ ವೇಳೆ ಪ್ರತಿಕ್ರಿಯಿಸಿದ್ದಾರೆ.

Last Updated : May 16, 2021, 6:36 PM IST

ABOUT THE AUTHOR

...view details