ಕರ್ನಾಟಕ

karnataka

ETV Bharat / briefs

ಸಚಿವರ ಎಚ್ಚರಿಕೆಗೆ ಎಚ್ಚೆತ್ತ ಪೊಲೀಸ್ ಇಲಾಖೆ: ಬೈಕ್​​ಗೆ ಬೆಂಕಿ ಇಟ್ಟವರ ಬಂಧನ - ಗಾಂಜಾ‌ ಮಾರಾಟಗಾರರ ಬಂಧನ

ಅಕ್ರ‌ಮ ಗಾಂಜಾ ಮಾರಾಟ ಮತ್ತು ಮನೆ ಮುಂದೆ ನಿಲ್ಲಿಸಿದ್ದ ಬೈಕ್, ಆಟೋಗೆ ಬೆಂಕಿ ಹಚ್ಚಿದ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Shivmogga police
Shivmogga police

By

Published : Jul 20, 2020, 5:56 PM IST

ಶಿವಮೊಗ್ಗ: ಸಚಿವ ಈಶ್ವರಪ್ಪ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕುವಂತೆ ಎಚ್ಚರಿಕೆ ನೀಡಿದ ಪರಿಣಾಮ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ 5 ಜನರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಂಜಾ‌ ಮಾರಾಟ ಮಾಡುತ್ತಿದ್ದ ಮೂವರು ಮತ್ತು ಬೈಕ್, ಆಟೋಗೆ ಬೆಂಕಿ ಹಚ್ಚಿದ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಅಣ್ಣ ನಗರದ ಹರೀಶ್, ತುಂಗಾ ನಗರದ ಎಜಾಸ್ ಹಾಗೂ ದೌಲತ್ ಎಂಬುವರನ್ನು ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಸಿಗೇಹಟ್ಟಿ ಹಾಗೂ ಇತರೆಡೆ ಬೈಕ್, ಆಟೋಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮಿಳ್ಳಘಟ್ಟದ ಸ್ಟೀಫನ್ ಹಾಗೂ‌ ಮೆಹಬೂಬ್ ಎಂಬುವರನ್ನು ಬಂಧಿಸಲಾಗಿದೆ.

ಕಳೆದ 15 ದಿನದಲ್ಲಿ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ಮನೆಮುಂದೆ ನಿಲ್ಲಿಸಿದ್ದ ಬೈಕ್, ಆಟೋಗಳಿಗೆ ಬೆಂಕಿ ಹಚ್ಚಲಾಗಿತ್ತು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಪೊಲೀಸ್ ಇಲಾಖೆ ವಿರುದ್ಧ ಮಾಧ್ಯಮಗಳ ಮುಂದೆಯೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಗಾಂಜಾ ಅರೋಪಿಗಳಿಂದ 1 ಕೆ.ಜಿ 400 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಇಸ್ಪೀಟ್ ಅಡ್ಡೆ ಮೇಲೆ ದಾಳಿ:

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಝಂಡಾ ಕಟ್ಟೆಯ ಬಳಿ ಇಸ್ಪೀಟ್ ಆಟ ಆಡುತ್ತಿದ್ದ 8 ಮಂದಿಯನ್ನು ಬಂಧಿಸಿ, ಇವರಿಂದ 1,25,820 ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ.

ABOUT THE AUTHOR

...view details