ಕರ್ನಾಟಕ

karnataka

ETV Bharat / briefs

ಚಿಕ್ಕಮಗಳೂರು: 61 ಜನರಿಗೆ ಕೊರೊನಾ ಸೋಂಕು ಪತ್ತೆ - Chikkamagaluru covid cases

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 61 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 677 ಕ್ಕೆ ಏರಿಕೆಯಾಗಿದೆ.

Chikkamagaluru
Chikkamagaluru

By

Published : Jul 26, 2020, 5:17 PM IST

ಚಿಕ್ಕಮಗಳೂರು : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು 61 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಚಿಕ್ಕಮಗಳೂರು ತಾಲೂಕಿನಲ್ಲಿ 18, ಕಡೂರು ತಾಲೂಕಿನಲ್ಲಿ 30, ತರೀಕೆರೆ ತಾಲೂಕಿನಲ್ಲಿ 12, ಮೂಡಿಗೆರೆ ತಾಲೂಕಿನಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಜೊತೆಗೆ ಇಂದು ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಇಂದು 05 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 381 ಜನ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 677 ಕ್ಕೆ ಏರಿಕೆಯಾಗಿದ್ದು, ಒಟ್ಟು 278 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details