ಕೊಪ್ಪಳ:ಜಿಲ್ಲೆಯಲ್ಲಿ ಇಂದು 637 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಕೊಪ್ಪಳದಲ್ಲಿ ಇಂದು 637 ಪಾಸಿಟಿವ್ ಪ್ರಕರಣ ಪತ್ತೆ: 5 ಮಂದಿ ಸಾವು - ಕೊಪ್ಪಳ ಕೊರೊನಾ ಪ್ರಕರಣಗಳ ಸಂಖ್ಯೆ
ಕೊಪ್ಪಳದಲ್ಲಿ ಇಂದು 637 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈವರೆಗೆ ಒಟ್ಟು 26873 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಕೊಪ್ಪಳದಲ್ಲಿ 235, ಗಂಗಾವತಿಯಲ್ಲಿ 223, ಕುಷ್ಟಗಿಯಲ್ಲಿ 57 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 122 ಪ್ರಕರಣ ಸೇರಿ ಒಟ್ಟು 637 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈವರೆಗೆ ಒಟ್ಟು 26,873 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು 5 ಜನ ಸೋಂಕಿತರು ಸಾವನ್ನಪ್ಪಿದ್ದು ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 445ಕ್ಕೆ ಏರಿಕಾಗಿದೆ.
ಇಂದು 398 ಜನರು ಗುಣಮುಖರಾಗಿದ್ದು ಈವರೆಗೆ ಒಟ್ಟು 21795 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4633 ಸಕ್ರಿಯ ಪ್ರಕರಣಗಳಿದ್ದು, 3,725 ಜನ ಸೋಂಕಿತರು ಹೋಂ ಐಸೋಲೇಷನ್ನಲ್ಲಿದ್ದಾರೆ. 908 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.