ವಿಜಯಪುರ: ಕೊರೊನಾ ಭಯದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಜೋರಾಪುರ ಪೇಟೆಯಲ್ಲಿ ನಡೆದಿದೆ.
57 ವರ್ಷದ ವ್ಯಕ್ತಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಅನಾರೋಗ್ಯದ ಕಾರಣದಿಂದ ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದನು. ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ತೆರಳಲು ವೈದ್ಯರು ಸೂಚಿಸಿದ್ದರು. ಆದರೆ ಕೋವಿಡ್ ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಮನೆಯಲ್ಲಿ ನಸುಕಿನ ಜಾವ ನೇಣಿಗೆ ಶರಣಾಗಿದ್ದಾನೆ.