ಮೈಸೂರು: ಸಾಂಸ್ಕೃತಿಕ ಇತಿಹಾಸ ಇರುವ ಮೈಸೂರು ರೈಲ್ವೆ ನಿಲ್ದಾಣ ಪಾರಂಪರಿಕತೆಗೆ ಯಾವುದೇ ಧಕ್ಕೆ ಬಾರದ ರೀತಿಯಲ್ಲಿ ನೂತನ ಕಾಮಗಾರಿ ಆರಂಭಿಸಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದ್ದಾರೆ.
ಮೈಸೂರು ರೈಲ್ವೆ ನಿಲ್ದಾಣದ ಪಾರಂಪರಿಕತೆಗೆ ಯಾವುದೇ ದಕ್ಕೆ ಇಲ್ಲ: ಸಿಂಹ ಭರವಸೆ - mysore
ಪಾರಂಪರಿಕ ಇತಿಹಾಸ ಹೊಂದಿರುವ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಹೊಸ ಕಟ್ಟಡ ಹಾಗೂ ಎಸ್ಕಲೇಟರ್ ಅಳವಡಿಕೆಯ ಕಾಮಗಾರಿಯನ್ನ ಮಂಗಳವಾರ ಸಂಸದ ಪ್ರತಾಪ್ ಸಿಂಹ ಪರಿಶೀಲಿಸಿದರು.
ಕಾಮಗಾರಿ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ
ಇಲ್ಲಿನ ಕಾಮಗಾರಿಗಳನ್ನು ಪರಿಶೀಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವರು ಕಾಮಗಾರಿ ಆರಂಭದಿಂದ ಪಾರಂಪರಿಕ ರೈಲ್ವೆ ನಿಲ್ದಾಣಕ್ಕೆ ಧಕ್ಕೆಯಾಗಲಿದೆ ಎಂದು ಆರೋಪ ಮಾಡುತ್ತಿದ್ದರು. ಆದರೆ, ಯಾವುದೇ ಧಕ್ಕೆಯಾಗದಂತೆ 16 ಕೋಟಿ ರೂ.ವೆಚ್ಚದಲ್ಲಿ ನೂತನ ಕಟ್ಟಡ ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಎಸ್ಕಲೇಟರ್ ಅಳವಡಿಸಲು ಕಾಮಗಾರಿ ಆರಂಭಿಸಲಾಗಿದೆ ಎಂದರು.
ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ. ರೈಲ್ವೆ ನಿಲ್ದಾಣ ಹಂತ ಹಂತವಾಗಿ ಅಭಿವೃದ್ಧಿಯಾಗುತ್ತಿದ್ದು. ಪ್ರವಾಸಿಗರ, ವಿದೇಶದವರ ಮೆಚ್ಚುಗೆಗೆ ಪಾತ್ರವಾಗಲಿದೆ ಎಂದರು.
Last Updated : May 28, 2019, 7:56 PM IST