ಢಾಕಾ: ಶಾಲಾ ಶಿಕ್ಷಕನೊಬ್ಬನಿಂದ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ವಿದ್ಯಾರ್ಥಿನಿಯೊಬ್ಬಳನ್ನ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿರುವ ಅಮಾನವೀಯ ಘಟನೆ ಬಾಂಗ್ಲಾದ ಢಾಕಾದಲ್ಲಿ ನಡೆದಿದೆ.
ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿ ದೂರು: ಬೆಂಕಿ ಹಚ್ಚಿ ಸುಟ್ಟು ಹಾಕಿದ ಕ್ರೂರಿಗಳು!
ಲೈಂಗಿಕ ದೌರ್ಜನ್ಯವೆಸಗಿದ್ದ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಳು. ಈ ವೇಳೆ ತನ್ನ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆಯುವಂತೆ 19 ವರ್ಷದ ನುಸ್ರತ್ ಜಹಾನ್ ರಫಿಯಗೆ ಶಿಕ್ಷಕ ಹಾಗೂ ಆತನ ಬೆಂಬಲಿಗರು ಒತ್ತಡ ಹೇರಿದ್ದರು.
ಲೈಂಗಿಕ ದೌರ್ಜನ್ಯವೆಸಗಿದ್ದ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಳು. ಈ ವೇಳೆ ತನ್ನ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆಯುವಂತೆ 19 ವರ್ಷದ ನುಸ್ರತ್ ಜಹಾನ್ ರಫಿಯಗೆ ಶಿಕ್ಷಕ ಹಾಗೂ ಆತನ ಬೆಂಬಲಿಗರು ಒತ್ತಡ ಹೇರಿದ್ದರು. ಆದರೆ, ಅದಕ್ಕೆ ವಿದ್ಯಾರ್ಥಿನಿ ನಿರಾಕರಿಸಿದ್ದಳು. ಇದರಿಂದ ಆಕ್ರೋಶಗೊಂಡ ಶಿಕ್ಷಕ ತನ್ನ ಬೆಂಬಲಿಗರಿಗೆ ಬೆಂಕಿ ಹಚ್ಚಿ ಕೊಂದು ಹಾಕುವಂತೆ ಆದೇಶ ನೀಡಿದ್ದನು.
ಅದರ ಪ್ರಕಾರ ನುಸ್ರತ್ ಜಹಾನ್ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಇತ ಘಟನೆಗೆ ಸಂಬಂಧಿಸಿದಂತೆ ಇಂದು ಪೊಲೀಸರು 17 ಮಂದಿ ಆರೋಪಿಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಅವರು ತಪ್ಪೊಪ್ಪಿಕೊಂಡಿದ್ದಾರೆ.