ಮೈಸೂರು: ಚುನಾವಣೆಗೆ ನಿಯೋಜನೆಗೊಂಡಿದ್ದ ಶಿಕ್ಷಕರೊಬ್ಬರು ಹೃದಯಾಘಾತ ಸಂಭವಿಸಿ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಜಿನ್ನಹಳ್ಳಿ ಗ್ರಾಮದ ನಿವಾಸಿಯಾದ ಪುಟ್ಟಸ್ವಾಮಯ್ಯ (54) ಮೃತ ಶಿಕ್ಷಕ. ಚುನಾವಣಾ ತರಬೇತಿಗೆಂದು ಮಳವಳ್ಳಿಗೆ ತೆರಳಿ ವಾಪಸ್ ಬಂದು, ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಿಂದ ತಮ್ಮ ಸ್ವಗ್ರಾಮಕ್ಕೆ ಹೋಗುವುದಕ್ಕಾಗಿ ಬೇರೊಂದು ಬಸ್ ಹತ್ತಲು ಬಸ್ನಿಂದ ಇಳಿಯುತ್ತಿದ್ದಾಗ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹೃದಯಾಘಾತ ಸಂಭವಿಸಿ ಬಸ್ ನಿಲ್ದಾಣದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಶಿಕ್ಷಕ - election training
ಚುನಾವಣಾ ತರಬೇತಿ ಮುಗಿಸಿಕೊಂಡು ಮನೆಗೆ ವಾಪಸ್ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತಕಕ್ಕೊಳಗಾಗಿ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಹೃದಯಾಘಾತ
ಇವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಅಂಶ ಮರಣೋತ್ತರ ಪರೀಕ್ಷೆಯಿಂದ ತಿಳಿದು ಬಂದಿದೆ. ಈ ಸಂಬಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.