ಚಾಮರಾಜನಗರ: ಗುಂಡ್ಲುಪೇಟೆಯ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗುಂಡ್ಲುಪೇಟೆ ಸಬ್ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ - Acb, raid,
ತಾಲೂಕು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಹಣ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ಕಚೇರಿ ಸಮಯ ಮುಗಿಯುವ ವೇಳೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ದಾಳಿ
ತಾಲೂಕು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಹಣ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ಕಚೇರಿ ಸಮಯ ಮುಗಿಯುವ ವೇಳೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸದ್ಯ ಕಚೇರಿಯಲ್ಲಿರುವ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಗುಂಡ್ಲುಪೇಟೆ ತಾಲೂಕು ಉಪನೋಂದಣಾಧಿಕಾರಿ ಟಿ.ಎಸ್.ರವಿ ಸಾರ್ವಜನಿಕರಿಂದ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಎಸಿಬಿ ಇನ್ಸ್ಪೆಕ್ಟರ್ ಶ್ರೀಕಾಂತ್ ನೇತೃತ್ವದ ತಂಡ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
Last Updated : May 27, 2019, 8:45 PM IST
TAGGED:
Acb, raid,