ಕರ್ನಾಟಕ

karnataka

ETV Bharat / briefs

ರೆಮ್ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಅಧಿಕಾರಿಗಳ ವಿರುದ್ಧ ಕ್ರಮ: ಡಾ. ಸುಧಾಕರ್

ಅಧಿಕಾರಿಗಳ ಸಭೆ ನಡೆಸಿದ ಸಚಿವರಾದ ಡಾ. ಕೆ.ಸುಧಾಕರ್, ಔಷಧಗಳ ಕಾಳಸಂತೆ ಮಾರಾಟದ ಬಗ್ಗೆ ಬಿಗಿ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದರು.

mysore
mysore

By

Published : Apr 22, 2021, 5:59 PM IST

ಮೈಸೂರು: ರೆಮ್ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಡ್ರಗ್ಸ್ ಕಂಟ್ರೋಲರ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಉಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ಔಷಧಗಳ ಕಾಳಸಂತೆ ಮಾರಾಟದ ಬಗ್ಗೆ ಬಿಗಿ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದರು. ಬೆಂಗಳೂರು ಮೆಡಿಕಲ್ ಕಾಲೇಜಿನಷ್ಟೇ ಮೈಸೂರು ಮೆಡಿಕಲ್ ಕಾಲೇಜು ಶಕ್ತವಾಗಿದೆ. ಕೆ.ಆರ್.ಆಸ್ಪತ್ರೆಯಲ್ಲಿ 2000 ಹಾಸಿಗೆಗಳಿದ್ದು, ಇಲ್ಲಿನ ಆಡಳಿತ ಇನ್ನೂ ಚುರುಕಾಗಬೇಕು. 2 ರಿಂದ 3 ದಿನಗಳಲ್ಲಿ ಕೋವಿಡ್ ಚಿಕಿತ್ಸೆಗೆ 1000 ಹಾಸಿಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಸೋಂಕಿತರನ್ನು ಬೇಗ ಗುರುತಿಸಿದರೆ ಚಿಕಿತ್ಸೆ ನೀಡಿದರೆ ಬೇಗ ಗುಣಪಡಿಸಬಹುದು. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತದಿಂದ ಉತ್ತಮ ಕೆಲಸ ಆಗಿದೆ. ಲಸಿಕೆಯನ್ನು ಸಹ ಹೆಚ್ಚಿನ ಸಂಖ್ಯೆಯಲ್ಲಿ ನೀಡಲಾಗಿದೆ. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಇರುವವರ ಪರೀಕ್ಷೆ ಮಾಡಿದರೂ ಸಾಕು, ಕೋವಿಡ್ ಹರಡುವಿಕೆ ನಿಯಂತ್ರಿಸಬಹುದು ಎಂದರು.

ಸುಮಾರು ಶೇ.95 ರಷ್ಟು ಸೋಂಕಿತರಿಗೆ ಆಸ್ಪತ್ರೆಗೆ ಸೇರಿಸುವುದೇ ಬೇಕಾಗಿಲ್ಲ. ಅವರಿಗೆ ಸೂಕ್ತ ಟೆಲಿಮೆಡಿಷನ್ ಮಾಡಿದರೆ ಮನೆಯಲ್ಲೇ ಗುಣಪಡಿಸಬಹುದಾಗಿದ್ದು, ಇದರ ಬಗ್ಗೆ ಆತಂಕ ಬೇಡ ಎಂದು ಹೇಳಿದರು.

For All Latest Updates

ABOUT THE AUTHOR

...view details