ಕರ್ನಾಟಕ

karnataka

ETV Bharat / briefs

ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿಯುವ ರಾಗಾ ನಿರ್ಧಾರ ಅಚಲ... ಜ್ಯೂ. ಇಂದಿರಾಗೆ ಪಟ್ಟ? - ರಾಹುಲ್​​ ಗಾಂಧಿ

ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಮುಂದಾಗಿರುವ ರಾಹುಲ್​ ತಮ್ಮ ನಿರ್ಧಾರವನ್ನು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ. ಮೂಲಗಳ ಪ್ರಕಾರ ರಾಗಾ ಅಧ್ಯಕ್ಷ ಸ್ಥಾನಕ್ಕೆ ಅರ್ಹ ವ್ಯಕ್ತಿಯನ್ನು ಹುಡುಕುವಂತೆ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗ್ತಿದೆ.

ಎಐಸಿಸಿ ಅಧ್ಯಕ್ಷ

By

Published : May 27, 2019, 10:18 PM IST

ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪ್ರತಿಪಕ್ಷದ ಸ್ಥಾನದ ಅರ್ಹತೆಯನ್ನೂ ಕಳೆದುಕೊಂಡಿದೆ. ಈ ಫಲಿತಾಂಶ ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿಯನ್ನು ಕಂಗೆಡಿಸಿದೆ.

ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರವನ್ನು ಅವರು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ ಎನ್ನಲಾಗ್ತಿದೆ. ಮೂಲಗಳ ಪ್ರಕಾರ ರಾಗಾ ಅಧ್ಯಕ್ಷ ಸ್ಥಾನಕ್ಕೆ ಅರ್ಹ ವ್ಯಕ್ತಿಯನ್ನು ಹುಡುಕುವಂತೆ ಪಕ್ಷದ ಹಿರಿಯ ನಾಯಕರಿಗೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಹುಲ್ ಗಾಂಧಿ ಪಕ್ಷದ ಹಿರಿಯ ನಾಯಕರಾದ ಅಹ್ಮದ್ ಪಟೇಲ್ ಹಾಗೂ ಕೆ.ಸಿ. ವೇಣುಗೋಪಾಲ್​ರನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ಅರ್ಹರನ್ನು ನೇಮಿಸುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಮೃತಿ ಇರಾನಿ ಆಪ್ತನ ಹತ್ಯೆ... ಮೂವರನ್ನು ಬಂಧಿಸಿ, ಕೊಲೆಗೆ ಕಾರಣ ನೀಡಿದ ಖಾಕಿಪಡೆ

ರಾಹುಲ್ ಸ್ಥಾನಕ್ಕೆ ಪ್ರಿಯಾಂಕ ಗಾಂಧಿ ವಾದ್ರಾ ಹೆಸರು ಕೇಳಿಬಂದಾಗ ತಮ್ಮ ಸಹೋದರಿಯನ್ನು ಎಳೆದು ತರುವುದು ಬೇಡ, ಅಧ್ಯಕ್ಷ ಸ್ಥಾನ ಗಾಂಧಿ ಕುಟುಂಬಕ್ಕೆ ಮಾತ್ರ ಸೀಮಿತವಲ್ಲ ಎಂದು ರಾಹುಲ್ ಹೇಳಿದ್ದಾರಂತೆ.

ಶನಿವಾರದಂದು ನಡೆದಿದ್ದ ಸಭೆಯಲ್ಲಿ ರಾಹುಲ್​​ ತಾವು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಮಾಡಿದ್ದಾಗಿ ಹೇಳಿದಾಗ ಎಲ್ಲರೂ ಒಮ್ಮತದಿಂದ ಇದನ್ನು ವಿರೋಧಿಸಿದ್ದರು.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಿರಾಶದಾಯಕ ಪ್ರದರ್ಶನದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ, ಒಡಿಶಾ, ಪಂಜಾಬ್, ಜಾರ್ಖಂಡ್ ರಾಜ್ಯ ಘಟಕದ ಅಧ್ಯಕ್ಷರು ಸ್ಥಾನದಿಂದ ಕೆಳಗಿಳಿದಿದ್ದಾರೆ. ಅಸ್ಸೋಂ ಹಾಗೂ ಪಂಜಾಬ್​ ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಸಹ ರಾಜೀನಾಮೆ ಸಲ್ಲಿಸಿದ್ದಾರೆ.

ABOUT THE AUTHOR

...view details