ಕರ್ನಾಟಕ

karnataka

ETV Bharat / briefs

2 ಅವರ್ಸ್​ ಕೌಂಟ್​: ಎನ್​ಡಿಎ ಭರ್ಜರಿ ನಾಗಾಲೋಟ... ತಾತ ಹಿನ್ನಡೆ, ಮೊಮ್ಮಗ ಮುಂದೆ - ರಿಸಲ್ಟ್

ಎರಡು ಗಂಟೆಗಳ ಬಳಿಕ ಮತಎಣಿಕೆಯಲ್ಲಿ ಎನ್​ಡಿಎ ಮೈತ್ರಿಕೂಟ ಬರೋಬ್ಬರಿ 303 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದರೆ, ಯುಪಿಎ 80 ಸೀಟುಗಳಲ್ಲಿ ಮುನ್ನಡೆ ಪಡೆದಿದೆ. ಇತರರು 100 ಕ್ಷೇತ್ರದಲ್ಲಿ ಮುಂದಿದ್ದಾರೆ.

ಎನ್​ಡಿಎ

By

Published : May 23, 2019, 10:07 AM IST

Updated : May 23, 2019, 10:13 AM IST

ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶದ ಮತ್ತಷ್ಟು ರಂಗೇರುತ್ತಿದ್ದು ಅಂಕಿ-ಅಂಶಗಳ ಹಾವು ಏಣಿ ಆಟ ನಡೆಯುತ್ತಿದೆ. ಘಟಾನುಘಟಿ ನಾಯಕರುಗಳ ಹಣೆಬರಹ ನಿರ್ಧಾರವಾಗಲಿದೆ.

ಎರಡು ಗಂಟೆಗಳ ಬಳಿಕ ಮತಎಣಿಕೆಯಲ್ಲಿ ಎನ್​ಡಿಎ ಮೈತ್ರಿಕೂಟ ಬರೋಬ್ಬರಿ 303 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದರೆ, ಯುಪಿಎ 80 ಸೀಟುಗಳಲ್ಲಿ ಮುನ್ನಡೆ ಪಡೆದಿದೆ. ಇತರರು 100 ಕ್ಷೇತ್ರದಲ್ಲಿ ಮುಂದಿದ್ದಾರೆ.

ಗುಜರಾತ್​​ನ ಗಾಂಧಿನಗರ ಕ್ಷೇತ್ರದಲ್ಲಿ ಬಿಜೆಪಿಯ ಅಮಿತ್ ಶಾ 65 ಸಾವಿರ ಮತಗಳಿಂದ ಮುನ್ನಡೆ ಪಡೆದಿದ್ದಾರೆ. ವಾರಣಾಸಿಯಲ್ಲಿ ನರೇಂದ್ರ ಮೋದಿ 50 ಸಾವಿರ ಮತದಿಂದ ಮುನ್ನಡೆಯಲ್ಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 17 ಹಾಗೂ ಬಿಜೆಪಿ 16 ಕ್ಷೇತ್ರದಲ್ಲಿ ಮುನ್ನಡೆ ಪಡೆದಿದೆ. ಗುಜರಾತ್​​ನ 25 ಕ್ಷೇತ್ರ ಹಾಗೂ ರಾಜಸ್ಥಾನದ ಎಲ್ಲ ಸೀಟುಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.

ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ 23, ಮೈತ್ರಿ ಸರ್ಕಾರ 5 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಹೈವೋಲ್ಟೇಜ್ ಕ್ಷೇತ್ರವಾದ ಮಂಡ್ಯದಲ್ಲಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಪಡೆದಿದ್ದಾರೆ. ಬಾಗಲ ಕೋಟೆ,ಬಳ್ಳಾರಿ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಕಲ್ಬುರ್ಗಿ, ದಕ್ಷಿಣ ಕನ್ನಡ,ಉತ್ತರ ಕನ್ನಡದಲ್ಲಿ ಬಿಜೆಪಿ ಮುನ್ನಡೆ ಪಡೆದಿದೆ. ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಹಿನ್ನಡೆ ಅನುಭವಿಸುತ್ತಿದ್ದಾರೆ.

Last Updated : May 23, 2019, 10:13 AM IST

ABOUT THE AUTHOR

...view details