ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಪುತ್ರ ಅಭಿಷೇಕ್ ನಟಿಸಿರುವ ಮೊದಲ ಚಿತ್ರ ಅಮರ್ ಪ್ರಮೋಷನ್ಗಾಗಿ ಚಿತ್ರಮಂದಿರಕ್ಕೆ ಆಗಮಿಸಿ ಅಭಿಮಾನಿಗಳೊಂದಿಗೆ ಸಿನಿಮಾ ವೀಕ್ಷಿಸಿದರು.
ನಗರದ ಕೆ.ಆರ್. ವೃತ್ತದಲ್ಲಿರುವ ಸಂಜಯ ಚಿತ್ರಮಂದಿರಕ್ಕೆ ಆಗಮಿಸಿದ್ದ ಅವರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ಆಗ ಬಾಲ್ಕಾನಿಯಿಂದಲೇ ಅಭಿಮಾನಿಗಳತ್ತ ಕೈ ಬೀಸಿದ ಸುಮಲತಾ ಕೃತಜ್ಞತೆ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಸಂಸದೆ ಸುಮಲತಾ ಅಂಬರೀಶ್ ಅವರು, ಪುತ್ರನ ಅಭಿನಯದ ಅಭಿಮಾನಿಗಳು ಹೇಳಬೇಕು. ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಮಂಡ್ಯ ಅಭಿಮಾನಿಗಳಂತೆ ಎಲ್ಲ ಜಿಲ್ಲೆಯ ಅಭಿಮಾನಿಗಳು ಸಹ ಈ ಚಿತ್ರವನ್ನು ಸಂತಸದಿಂದ ಸ್ವಾಗತಿಸುವ ವಿಶ್ವಾಸವಿದೆ ಎಂದರು.