ನವದೆಹಲಿ: 17ನೇ ಲೋಕಸಭಾ ಚುನಾವಣೆ ಮುಕ್ತಾಯಗೊಳ್ತಿದ್ದಂತೆ ಬಿಡುಗಡೆಯಾಗಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಎನ್ಡಿಎ ಕೈ ಮೇಲಾಗಿದೆ. ಇದೇ ಖುಷಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮಿತ್ರಕೂಟದ ನಾಯಕರುಗಳಿಗೆ ಭರ್ಜರಿ ಔತಣಕೂಟ ಏರ್ಪಡಿಸಿದ್ದಾರೆ.
ನವದೆಹಲಿಯ ಅಶೋಕಾ ಹೊಟೇಲ್ನಲ್ಲಿ ಔತಣಕೂಟ ಏರ್ಪಾಡಾಗಿದ್ದು, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮಿಳುನಾಡಿನ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ,ರಾಮವಿಲಾಸ್ ಪಾಸ್ವಾನ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ. ಇದರ ಜತೆಗೆ ಕೇಂದ್ರ ಸಚಿವರು ಪಾಲ್ಗೊಂಡಿದ್ದಾರೆ.