ಬೆಳಗಾವಿ:ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರಯುಕ್ತ ಜಾಗೃತಿ ರಥಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಜೆ.ಸತೀಶ ಸಿಂಗ್ ಹಾಗೂ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ, ವಿವಿಧ ಇಲಾಖೆಗಳು, ಕಾರ್ಮಿಕ ಸಂಘಗಳು ಹಾಗೂ ಸರ್ಕಾರೇತರ
ಸಂಸ್ಥೆಗಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಆರ್.ಜೆ. ಸತೀಶ ಸಿಂಗ್, ಕೊರೊನಾ ಹಿನ್ನೆಲೆಯಲ್ಲಿ ವಿಶೇಷ ಜಾಗೃತಿ ರಥದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿಯು ದೇಶದಲ್ಲಿ ಸಂಪೂರ್ಣವಾಗಿ ನಿರ್ಮೂಲನೆ ಆಗಬೇಕು. ಆ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದರು.