ಬೆಂಗಳೂರು : ಕೋವಿಡ್ ಎರಡನೇ ಅಲೆ ಬಳಿಕ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವ ವಕೀಲರಿಗೆ ನೆರವು ಕೋರಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ ರಂಗನಾಥ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಕೋವಿಡ್ನಿಂದ ಆರ್ಥಿಕ ಸಂಕಷ್ಟ : ವಕೀಲರ ಸಹಾಯಕ್ಕೆ ಧಾವಿಸುವಂತೆ ಗೃಹ ಸಚಿವರಿಗೆ ಮನವಿ
ಸೋಂಕಿನಿಂದ ಮೃತಪಟ್ಟ ವಕೀಲರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ ನೀಡುವ ಕುರಿತು, ಕೋವಿಡ್ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಹಾಗೂ ರಾಜ್ಯದ ವಕೀಲರಿಗೆ ವಿಮಾ ಯೋಜನೆ ಜಾರಿಗೊಳಿಸುವ ಕುರಿತು ಚರ್ಚಿಸಿದರು..
ರಾಜ್ಯದಲ್ಲಿ ಕೊರೊನಾ ಸೋಂಕು ಬಂದ ಬಳಿಕ ವಕೀಲರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎರಡನೇ ಅಲೆ ಆರಂಭವಾದ ನಂತರ ಸಾವಿರಾರು ವಕೀಲರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಇವರಲ್ಲಿ 218ಕ್ಕೂ ಅಧಿಕ ವಕೀಲರು ಸೋಂಕಿಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆ ವಕೀಲರಿಗೆ ನೆರವು ಕೋರಲು ಎಎಬಿ ಅಧ್ಯಕ್ಷರು ಇಂದು ಗೃಹ ಸಚಿವರನ್ನು ಭೇಟಿ ಮಾಡಿದರು.
ಭೇಟಿ ವೇಳೆ ಕೋವಿಡ್ ಸೋಂಕಿನಿಂದ ಮೃತಪಟ್ಟ ವಕೀಲರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ ನೀಡುವ ಕುರಿತು, ಕೋವಿಡ್ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಹಾಗೂ ರಾಜ್ಯದ ವಕೀಲರಿಗೆ ವಿಮಾ ಯೋಜನೆ ಜಾರಿಗೊಳಿಸುವ ಕುರಿತು ಚರ್ಚಿಸಿದರು. ಈ ಬಗ್ಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಎಎಬಿ ಅಧ್ಯಕ್ಷರು ಸಚಿವರಿಗೆ ಮನವಿ ಮಾಡಿದರು.