ಬೆಂಗಳೂರು :ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆ ಹಾಗೂ ನಗರ ಸ್ಥಳಿಯ ಸಂಸ್ಥೆಗಳ ಚುನಾವಣೆ ವೇಳೆ ಕರ್ತವ್ಯ ನಿರ್ವಹಿಸಿ, ಆ ಬಳಿಕ ಕೋವಿಡ್ ಸೋಂಕಿನಿಂದ ಮೃತಪಟ್ಟ ನೌಕರರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಚುನಾವಣೆ ಕರ್ತವ್ಯದಲ್ಲಿದ್ದು ಸೋಂಕಿಗೆ ಬಲಿಯಾದವರಿಗೆ 1 ಕೋಟಿ ನೀಡಿ: ಪರಿಹಾರ ಕೋರಿ ಹೈಕೋರ್ಟ್ಗೆ ಅರ್ಜಿ
ಚುನಾವಣೆ ವೇಳೆ ಕರ್ತವ್ಯ ನಿರ್ವಹಿಸಿ, ಆ ಬಳಿಕ ಕೋವಿಡ್ ಸೋಂಕಿನಿಂದ ಮೃತಪಟ್ಟ ನೌಕರರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಬೀದರ್ ನ ಸಾಮಾಜಿಕ ಕಾರ್ಯಕರ್ತ ಅಂಬರೀಷ್ ಎಸ್. ಕೆಂಚ ಎಂಬುವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅಜಿರ್ಯಲ್ಲಿ ಭಾರತೀಯ ಚುನಾವಣಾ ಆಯೋಗ, ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಗಳನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ಅರ್ಜಿದಾರರ ಕೋರಿಕೆ :
ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದ್ದ ಸಂದರ್ಭದಲ್ಲಿ ಚುನಾವಣೆಗಳನ್ನು ನಡೆಸಲಾಗಿದೆ. ಇದರಿಂದಾಗಿ ಸೋಂಕು ವ್ಯಾಪಕವಾಗಿ ಹರಡಿ, ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅನೇಕ ಸಿಬ್ಬಂದಿ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಸಿಬ್ಬಂದಿಯ ಕುಟುಂಬದವರಿಗೂ ಸೋಂಕು ಹರಡಿದ್ದು, ಕೆಲವರು ಮೃತಪಟ್ಟಿದ್ದಾರೆ. ಹಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸರ್ಕಾರ ಹಾಗೂ ಚುನಾವಣಾ ಆಯೋಗದ ನಿರ್ಲಕ್ಷ್ಯದಿಂದಲೇ ಸಿಬ್ಬಂದಿ ಸಾವನ್ನಪ್ಪಿದ್ದು, ತಪ್ಪಿತಸ್ಥರ ವಿರುದ್ಧ ಕೊಲೆ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಮೃತ ಸಿಬ್ಬಂದಿಯ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವ ಜತೆಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು. ಕುಟುಂಬ ಸದಸ್ಯರು ಯಾರಾದರೂ ಸೋಂಕಿನಿಂದ ಮೃತಪಟ್ಟಿದ್ದರೆ ಅವರಿಗೆ ತಲಾ 30 ಲಕ್ಷ ಪರಿಹಾರ ನೀಡಬೇಕು. ಸೋಂಕಿತರ ಸಂರ್ಪೂಣ ಚಿಕಿತ್ಸಾ ವೆಚ್ಚ ಭರಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅಜಿರ್ದಾರರು ಮನವಿ ಮಾಡಿದ್ದಾರೆ.