ಕರ್ನಾಟಕ

karnataka

By

Published : Aug 23, 2019, 7:11 AM IST

ETV Bharat / briefs

ಗಾಂಧಿದೇವಿ ಸಿನಿಮಾ ಪ್ರಶಸ್ತಿಗೆ ಆಯ್ಕೆ ಕೋರಿ ಅರ್ಜಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್​​​

ಇತ್ತೀಚೆಗೆ ನೀಡಿದ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಗಾಂಧಿದೇವಿ ಸಿನಿಮಾಗೆ ಒಂದೇ ಒಂದು ಪ್ರಶಸ್ತಿಯನ್ನೂ ನೀಡಿಲ್ಲ. ಹಾಗಾಗಿ ಈ ಚಿತ್ರವನ್ನು ಪ್ರಶಸ್ತಿಗೆ ಆಯ್ಕೆ ಮಾಡಬೇಕೆಂದು ಕೋರಿ ಸಲ್ಲಿಸಿಕೆಯಾದ ಅರ್ಜಿ ಸಂಬಂಧ ಕೇಂದ್ರ ಸರ್ಕಾರ ಸೇರಿ ನಾಲ್ವರು ಪ್ರತಿವಾದಿಗಳಿಗೆ ಹೈಕೊರ್ಟ್​ ನೊಟೀಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ಹೈಕೋರ್ಟ್

66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಗಾಂಧಿದೇವಿ ಸಿನಿಮಾವನ್ನು ಆಯ್ಕೆ ಮಾಡಬೇಕೆಂದು ಕೋರಿ ಸಲ್ಲಿಸಿಕೆಯಾದ ಅರ್ಜಿ ಸಂಬಂಧ ಕೇಂದ್ರ ಸರ್ಕಾರ ಸೇರಿ ನಾಲ್ವರು ಪ್ರತಿವಾದಿಗಳಿಗೆಹೈಕೊರ್ಟ್ನೊಟೀಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ಈ ಕುರಿತು ಗುರುಸಾರ್ವಭೌಮ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು‌ ಗಾಂಧಿದೇವಿ ಎಂಬ ಹೊಸ ಸಿನಿಮಾವನ್ನು ಚಿತ್ರೀಕರಿಸಿ ಇಡೀ ಭಾರತದಲ್ಲಿಯೇ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಇತ್ತೀಚೆಗೆ ನೀಡಿದ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಗಾಂಧಿದೇವಿ ಸಿನಿಮಾಗೆ ಒಂದೇ ಒಂದು ಪ್ರಶಸ್ತಿಯನ್ನೂ ನೀಡಿಲ್ಲ. ಈ ಸಿನಿಮಾಕ್ಕೂ ಪ್ರಶಸ್ತಿ ನೀಡಲು ನಿರ್ದೇಶಿಸಬೇಕೆಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಕೇಂದ್ರ ಸರ್ಕಾರದ ಫೀಲಂ ಫೆಸ್ಟಿವಲ್‌ನ ನಿರ್ದೇಶಕರಿಗೆ ನೊಟೀಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ABOUT THE AUTHOR

...view details