ಮಂಡ್ಯ:ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಹಾಗೂ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ವಿರುದ್ಧ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಚುನಾವಣಾಧಿಕಾರಿ ಹಾಗೂ ಎಸ್ಪಿಗೆ ದೂರು ನೀಡಲಾಗಿದೆ.
ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಆರೋಪ: ಪತ್ರಕರ್ತರಿಂದ ಚುನಾವಣಾಧಿಕಾರಿಗೆ ದೂರು
ಶ್ರೀರಂಗಪಟ್ಟಣದ ಕೆಆರ್ಎಸ್ನಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಹಾಗೂ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ವಿರುದ್ಧ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ.
ನಿನ್ನೆ ಶ್ರೀರಂಗಪಟ್ಟಣದ ಕೆಆರ್ಎಸ್ನಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆದಿತ್ತು. ಜೊತೆಗೆ ಕೆಆರ್ಎಸ್ನಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಚೋದಿತ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಡ್ಯ ಜಿಲ್ಲಾ ಘಟಕದಿಂದ ಚುನಾವಣಾಧಿಕಾರಿ ಹಾಗೂ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ.
ಸಿಎಂ ಹೇಳಿಕೆ ಹಾಗೂ ಕೆಲ ಜೆಡಿಎಸ್ ಕಾರ್ಯಕರ್ತರ ಗೂಂಡಾ ವರ್ತನೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮಾಧ್ಯಮಗಳಿಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಚುನಾವಣಾಧಿಕಾರಿಗಳಲ್ಲಿ ಮನವಿ ಮಾಡಲಾಗಿದೆ.