ಕಲಬುರಗಿ:ಮಹಾಮಾರಿ ಕೊರೊನಾದಿಂದ ಸಂಕಷ್ಟದಲ್ಲಿರುವ ಜಿಲ್ಲೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಒಂದು ಆ್ಯಂಬುಲೆನ್ಸ್ ಮತ್ತು ಐದು ಆಮ್ಲಜನಕ ಸಾಂದ್ರಕಗಳನ್ನು ನೀಡಿದ್ದಾರೆ.
'ಮೈ ಸೇವಾ' ತಂಡದ ಮೂಲಕ ಆ್ಯಂಬುಲೆನ್ಸ್ ಮತ್ತು ಆಮ್ಲಜನಕ ಸಾಂದ್ರಕಗಳನ್ನು ಕಳುಹಿಸಿಕೊಡಲಾಗಿದೆ. ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ನಗರ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ್ ಹಾಗೂ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ ತೆಗನೂರ ಆ್ಯಂಬುಲೆನ್ಸ್ ಹಾಗೂ ಆಮ್ಲಜನಕ ಸಾಂದ್ರಕಗಳನ್ನು ಪಡೆದುಕೊಂಡರು.