ಬಾಗೇಪಲ್ಲಿ:ನಗರದಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳಿಗೆ 215.84 ಲಕ್ಷ ರೂಪಾಯಿಗಳ ಬಡ್ಡಿ ರಹಿತ ಸಾಲ ವಿತರಣೆ ಮಾಡಲಾಯಿತು.
ಮಹಿಳಾ ಸ್ವ-ಸಹಾಯ ಸಂಘಗಳಿಗೆ 215.84 ಲಕ್ಷ ರೂ. ಬಡ್ಡಿ ರಹಿತ ಸಾಲ ವಿತರಣೆ - Bagepalli dcc band loan distribution
ಮಹಿಳಾ ಸ್ವ-ಸಹಾಯ ಸಂಘಗಳಿಗೆ 215.84 ಲಕ್ಷ ರೂಪಾಯಿಗಳ ಬಡ್ಡಿ ರಹಿತ ಸಾಲವನ್ನು ಬಾಗೇಪಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ನೀಡಲಾಯಿತು.
ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಬಡ್ಡಿ ರಹಿತ ಸಾಲ ವಿತರಣೆ ಮಾಡುತ್ತಿದ್ದೇವೆ. ಸಾಲವನ್ನು ನಿಗದಿತ ಉದ್ದೇಶಕ್ಕೆ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮತ್ತಷ್ಟು ಅಭಿವೃದ್ಧಿಯಾಗಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದ ಗೌಡ ತಿಳಿಸಿದರು.
ಸ್ವ-ಸಹಾಯ ಸಂಘಗಳಿಗೆ ಚೆಕ್ ವಿತರಣೆ ಬಳಿಕ ಮಾತನಾಡಿದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ, ಸ್ವಾವಲಂಬಿಯಾಗಿ ಬದುಕಲು, ಆರ್ಥಿಕ ಸಧೃಡತೆ ಹೊಂದಲು ಸ್ವ-ಸಹಾಯ ಸಂಘಗಳು ಬ್ಯಾಂಕಿನೊಂದಿಗೆ ಉತ್ತಮ ವ್ಯವಹಾರ ಇಟ್ಟುಕೊಳ್ಳಬೇಕು ಎಂದ ಅವರು,ಸ್ವ-ಸಹಾಯ ಸಂಘಗಳಿಗೆ ಸಾಲ ನೀಡಲಾಗಿದೆ. ಪಡೆದ ಸಾಲವನ್ನು ಸದ್ಭಳಕೆಮಾಡಿಕೊಂಡು ಆರ್ಥಿಕ ಸ್ವಾವಲಂಬಿ ಜೀವನ ನಡೆಸುವ ಮೂಲಕ ಸಕಾಲಕ್ಕೆ ಸಾಲ ಮರುಪಾವತಿಸಬೇಕು ಎಂದು ಅನುಭವಿಗಳಿಗೆ ತಿಳಿಸಿದರು.