ಹಾವೇರಿ:ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿರೋ ತಾಲೂಕು ಆಸ್ಪತ್ರೆ ಹಾಗೂ ರಟ್ಟೀಹಳ್ಳಿ ತಾಲೂಕಿನ ಮಾಸೂರು ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ ಭೇಟಿ ನೀಡಿದರು.
ರಟ್ಟೀಹಳ್ಳಿ ತಾಲೂಕು ಆಸ್ಪತ್ರೆ, ಮಾಸೂರು ಆರೋಗ್ಯ ಕೇಂದ್ರಕ್ಕೆ ಸಚಿವ ಬಿ.ಸಿ. ಪಾಟೀಲ ಭೇಟಿ - ಕೃಷಿ ಸಚಿವ ಬಿ.ಸಿ. ಪಾಟೀಲ್
ಕೋವಿಡ್ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ರೆ ಕೆಲಸಕ್ಕೆ ಕುತ್ತು ಬರೋದರ ಜೊತೆಗೆ ಕ್ರಿಮಿನಲ್ ಕೇಸ್ ಬುಕ್ ಆಗುತ್ತವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
BC Patil
ಆಸ್ಪತ್ರೆಯಲ್ಲಿನ ಪರಿಕರಗಳು, ಕೋವಿಡ್ ಕೇಂದ್ರದ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ಜನರಿಗೆ ತೊಂದರೆ ಆಗದಂತೆ, ವೈದ್ಯರ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಕೋವಿಡ್ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ರೆ ಕೆಲಸಕ್ಕೆ ಕುತ್ತು ಬರೋದರ ಜೊತೆಗೆ ಕ್ರಿಮಿನಲ್ ಕೇಸ್ ಬುಕ್ ಆಗುತ್ತವೆ ಎಂದು ವೈದ್ಯರು ಮತ್ತು ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.
ಇನ್ನು ಸಚಿವ ಪಾಟೀಲ್ಗೆ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಸಾಥ್ ನೀಡಿದರು.
Last Updated : May 9, 2021, 9:47 PM IST