ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಅವರು ಇಂದು ಮಧ್ಯಾಹ್ನ ಕೋಲ್ಕತ್ತಾಗೆ ತೆರಳುವುದನ್ನು ಮುಂದೂಡಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೊಮ್ಮೆ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಧನ್ಖರ್ ಅವರು ನಿನ್ನೆ ಶಾ ಅವರೊಂದಿಗೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ಚುನಾವಣಾ ನಂತರದ ಹಿಂಸಾಚಾರದ ಹಲವಾರು ಘಟನೆಗಳು ವರದಿಯಾಗಿರುವ ಬಗ್ಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಗೃಹ ಸಚಿವರಿಗೆ ವಿವರಿಸಿದ್ದಾರೆಂದು ತಿಳಿದು ಬಂದಿದೆ.